ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ವಿಠಲಾಪುರ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಸೋಲಿನಿಂದ ಹತಾಶರಾದ ಜೆಡಿಎಸ್ ಸದಸ್ಯರಿಂದ ಘರ್ಷಣೆಗಿಳಿದಿದ್ದು, ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಲಾಗಿದೆ.
ಇಂದು ವಿಠಲಾಪುರ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ವಿಠಲಾಪುರ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ವಶವಾಗಿತ್ತು.
ಜೆಡಿಎಸ್ ಗೆ ಮತ ಹಾಕುವುದಾಗಿ ಹಣ ಪಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಮತ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದರಿಂದ ಆಕ್ರೋಶಗೊಂಡ ಜೆಡಿಎಸ್ ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರರು ವಿಠಲಾಪುರ ಗ್ರಾಪಂ ಹೊರಾವರಣದಲ್ಲಿ ಪರಸ್ಪರ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ, ತಳ್ಳಾಡಿದ್ದಾರೆ.