Monday, May 25, 2026
Google search engine

Homeರಾಜಕೀಯಸಚಿವ ಸಂಪುಟ ವಿಸ್ತರಣೆ ವಿಳಂಬ ; ಕಾಂಗ್ರೆಸ್ ಆಡಳಿತಕ್ಕೆ ರಾಜಕೀಯ ಒತ್ತಡ

ಸಚಿವ ಸಂಪುಟ ವಿಸ್ತರಣೆ ವಿಳಂಬ ; ಕಾಂಗ್ರೆಸ್ ಆಡಳಿತಕ್ಕೆ ರಾಜಕೀಯ ಒತ್ತಡ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ, ಪಕ್ಷದೊಳಗಿನ ನಾಯಕತ್ವದ ಗೊಂದಲ ಇನ್ನೂ ಅಂತ್ಯವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿಚಾರ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳ ಆಡಳಿತ ಪೂರ್ಣಗೊಳಿಸಿದ್ದರೂ, ನಾಯಕತ್ವ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಕುರಿತ ಗೊಂದಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಸ್ಪಷ್ಟನೆ ನೀಡಿಲ್ಲದೆ ಇರುವುದು ಈ ಅನಿಶ್ಚಿತತೆ ಸರ್ಕಾರ ಹಾಗೂ ಪಕ್ಷದ ಸಂಘಟನೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಪೈಪೋಟಿ ಸರ್ಕಾರದ ಒಳರಾಜಕೀಯವನ್ನು ನಿರಂತರವಾಗಿ ಚರ್ಚೆಯ ಕೇಂದ್ರಬಿಂದುವಾಗಿಸಿದ್ದು, ಇದರಿಂದ ಆಡಳಿತದ ಗಮನ ಬೇರೆಡೆ ತಿರುಗುತ್ತಿದ್ದು, ಸರ್ಕಾರದಲ್ಲಿ ಅಸ್ಥಿರತೆಯ ವಾತಾವರಣ ನಿರ್ಮಾಣವಾಗುತ್ತಿದೆ ಎನ್ನಲಾಗುತ್ತಿದೆ.

ಇನ್ನೊಂದೆಡೆ, ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರದಲ್ಲೂ ಕಾಂಗ್ರೆಸ್ ಹೈಕಮಾಂಡ್ ವಿಳಂಬ ಮಾಡುತ್ತಿರುವುದು ಶಾಸಕರು ಮತ್ತು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೈಕಮಾಂಡ್‌ನ ಮೌನ ಮತ್ತು ನಿರ್ಧಾರಗಳ ವಿಳಂಬ ಆಡಳಿತ ಯಂತ್ರದ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ನಾಯಕತ್ವ ಬದಲಾವಣೆಯ ಕುರಿತ ನಿರಂತರ ಊಹಾಪೋಹಗಳು ಕಾಂಗ್ರೆಸ್ ಶಾಸಕರು ಹಾಗೂ ತಳಮಟ್ಟದ ಕಾರ್ಯಕರ್ತರ ಉತ್ಸಾಹ ಕುಗ್ಗಿಸುವಂತಾಗಿದ್ದು, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೂ ವಿಳಂಬವಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular