ಮಂಡ್ಯ: ರಾಜ್ಯ ಸರ್ಕಾರದಿಂದ ಬರ ಪರಿಹಾರ ವಿತರಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕೊಪ್ಪದಲ್ಲಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ತೆಂಗು ಸೇರಿದಂತೆ ಹಲವು ಬೆಳೆಗಳಿಗೆ ಪರಿಹಾರ ಘೋಷಣೆಗೆ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ರೈತರನ್ನ ಕಡೆ ಗಣಿಸಿದೆ ಬರ ಪರಿಹಾರ ನೀಡಿಲ್ಲ. ರೈತರು ಬೆಳೆದ ಬೆಳೆ ಕಬ್ಬು, ತೆಂಗು ಸೇರಿ ಹಲವು ಬೆಳೆಗಳು ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ತಕ್ಷಣವೇ ಬರ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ನಂಜುಂಡಸ್ವಾಮಿ, ಮಹೇಂದ್ರ , ನಾಗರಾಜ್,ಸೂ ಸಿ. ಪ್ರಕಾಶ್, ಉಮೇಶ್, ಸೇರಿದಂತೆ ಇತರರು ಪಾಲ್ಗೊಂಡಿದ್ದರು.