ನವದೆಹಲಿ: ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಇಂದು (ಜ.7) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದೆ. ಅದರಂತೆ ದೆಹಲಿ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಸಮಿತಿ ಇಂದು ಮಧ್ಯಾಹ್ನ 2 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಈ ವೇಳೆ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ.
ಈ ಹಿಂದೆ 2020ರ ಫೆಬ್ರವರಿ 8 ರಂದು ಮತದಾನ ನಡೆಯಿತು ಮತ್ತು ಫೆಬ್ರವರಿ 11 ರಂದು ಮತಗಳನ್ನು ಎಣಿಕೆ ಮಾಡಲಾಯಿತು. ಈ ವೇಳೆ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿತ್ತು, ಇದೀಗ ಮತ್ತೆ ಚುನಾವಣೆಗೆ ಅಣಿಯಾಗುತ್ತಿದ್ದು ಮತ್ತೆ ಆಮ್ ಆದ್ಮಿ ಪಕ್ಷ ಆಡಳಿತ ನಡೆಸಲು ಎಲ್ಲ ತಯಾರಿ ನಡೆಸುತ್ತಿದೆ ಜೊತೆಗೆ ಮತದಾರರನ್ನು ಸೆಳೆಯಲು ನಾನಾ ರೀತಿಯ ಕಸರತ್ತನ್ನು ನಡೆಸುತ್ತಿದೆ, ಇದರ ನಡುವೆ ಬಿಜೆಪಿ ದೆಹಲಿಯಲ್ಲಿ ಗದ್ದುಗೆ ಏರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಜೊತೆಗೆ ಕಾಂಗ್ರೆಸ್ ಕೂಡ ತನ್ನದೇ ಶೈಲಿಯಲ್ಲಿ ಕಾರ್ಯತಂತ್ರ ನಡೆಸುತ್ತಿದೆ.
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ 2024 ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್‌ನ ಭಾಗವಾಗಿ ಒಟ್ಟಿಗೆ ಸ್ಪರ್ಧಿಸಿದ್ದರೂ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ.
ಒಟ್ಟಿನಲ್ಲಿ ಫೆಬ್ರವರಿಯಲ್ಲಿ ನಡೆಯುವ ಚುನಾವಣೆಯಲ್ಲಿ ಯಾವ ಪಕ್ಷದ ಕಾರ್ಯತಂತ್ರ ಕೆಲಸ ಮಾಡಲಿದೆ ಎಂಬುದು ಕಾದುನೋಡಬೇಕು.