Friday, April 18, 2025
Google search engine

Homeಅಪರಾಧಕಾನೂನುದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ.

ಇದಕ್ಕೂ ಮೊದಲು ಸೋಮವಾರದಂದು ತಿಹಾರ್​ ಜೈಲಿನಲ್ಲೇ ಕೇಜ್ರಿವಾಲ್​ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದರು.

ಮಂಗಳವಾರವೂ ಮತ್ತೊಮ್ಮೆ ವಿಚಾರಣೆ ನಡೆಸಿದ್ದರು. ಬಳಿಕ ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ಕೇಜ್ರಿವಾಲ್​ ಅವರನ್ನು ಹಾಜರು ಪಡಿಸಲು ಅನುಮತಿಯನ್ನು ಸಿಬಿಐ ಪಡೆದಿತ್ತು. ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿ ಅಧಿಕೃತವಾಗಿ ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಮಾರ್ಚ್​ 21ರಂದು ಇಡಿ ಅಧಿಕಾರಿಗಳು ಕೇಜ್ರಿವಾಲ್​ ಅವರನ್ನು ಬಂಧಿಸಿದ್ದರು.

RELATED ARTICLES
- Advertisment -
Google search engine

Most Popular