ಮಂಗಳೂರು (ದಕ್ಷಿಣ ಕನ್ನಡ) : ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ದ. ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೆ.7ರಿಂದ 9 ರವರೆಗೆ ದ.ಕ ಜಿಲ್ಲಾದ್ಯಂತ ಯುವಜನ ಜಾಥಾ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ತಿಳಿಸಿದ್ದಾರೆ.
ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಸೆ. 7ರಂದು ಬೆಳಗ್ಗೆ 9:30ಕ್ಕೆ ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜಾಥಾಕ್ಕೆ ಚಾಲನೆ ದೊರೆಯಲಿದೆ. ಅನಂತರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜಾಥಾ ಸಂಚರಿಸಲಿದೆ. ಸೆ.9ರಂದು ಸಂಜೆ 4ಕ್ಕೆ ಮಂಗಳೂರಿನಲ್ಲಿ ಸಮಾರೋಪ ನಡೆಯಲಿದ್ದು, ಸಾರ್ವಜನಿಕ ಸಭೆಯ ಮುನ್ನ ಡಾ ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಯುವಜನರ ಬೃಹತ್ ಮೆರವಣೆಗೆ ನಡೆಯಲಿರು ವುದು ಎಂದು ವಿವರಿಸಿದರು.