Friday, April 11, 2025
Google search engine

Homeಸ್ಥಳೀಯಉಪಯೋಗಕ್ಕೆ ಬಾರದ ಶುದ್ಧ ನೀರಿನ ಘಟಕ ದುರಸ್ಥಿಗೊಳಿಸಲು ಗ್ರಾಮಸ್ಥರ ಅಗ್ರಹ

ಉಪಯೋಗಕ್ಕೆ ಬಾರದ ಶುದ್ಧ ನೀರಿನ ಘಟಕ ದುರಸ್ಥಿಗೊಳಿಸಲು ಗ್ರಾಮಸ್ಥರ ಅಗ್ರಹ


ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಉಪಯೋಗಕ್ಕೆ ಬಾರದಂತೆ ಕೆಟ್ಟು ನಿoತಿದೆ. ಘಟಕದ ಸುತ್ತ ಮುತ್ತ ಮುಳ್ಳು ಗಿಡ ಗಂಟೆಗಳು ಬೆಳೆದು ಅವ್ಯವಸ್ತೆಯಿಂದ ಕೂಡಿದೆ. ಇದರಿಂದ ಗ್ರಾಮದ ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಇಡೀ ಶಾಪ ಹಾಕುತ್ತಿದ್ದಾರೆ. ಪಟ್ಟಣದ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ.
ಈ ಬಗ್ಗೆ ಗ್ರಾಮದ ಜನರನ್ನು ವಿಚಾರಿಸಿದಾಗ ಕೆಟ್ಟು ನಿಂತು ೨ ವರ್ಷವೇ ಕಳೆದಿದೆ ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತ ವಾಗಲಿ ಅಥವಾ ಸಂಬಂದಿಸಿದ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಅವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಸೌಲಭ್ಯದಿಂದ ವಂಚಿತವಾಗಿದೆ.
ಸರ್ಕಾರವು ಗ್ರಾಮೀಣ ಜನತೆಯ ಆರೋಗ್ಯ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿ ಮಾಡಿದ್ದೂ ಬಳಕೆಗೆ ಬಾರದಿರುವುದು ದುರ ದೃಷ್ಟಕರವಾಗಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿಯು ಕೂಡ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ. ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

RELATED ARTICLES
- Advertisment -
Google search engine

Most Popular