ಮಂಗಳೂರು (ದಕ್ಷಿಣ ಕನ್ನಡ): ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನ ಸೌಧದ ಬಳಿ ಇಂದು ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಬೆನ್ನಲ್ಲೇ ಏಕಾ ಏಕಿ ರಸ್ತೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು
ಅಂಬೇಡ್ಕರ್ ಕುರಿತ ಅಂಬೇಡ್ಕರ್ ಹೇಳಿಕೆ ಮತ್ತು ವಿಧಾನ ಪರಿಷತ್‌ನಲ್ಲಿ ಸಿಟಿ ರವಿ ವರ್ತನೆ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬೆನ್ನಲ್ಲೇ ಏಕಾಏಕಿ ರಸ್ತೆಗಿಳಿದ ಕಾಂಗ್ರೇಸ್ ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ ಪೊಲೀಸರು ಪ್ರತಿಭಟನಕಾರರನ್ನು ರಸ್ತೆಯಿಂದ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.