ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಕಳೆದ ೨೪ ಗಂಟೆಯಲ್ಲಿ ೨೭೮ ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿ ಡೆಂಗ್ಯೂ ಕೇಸ್ ೨೦,೭೨೯ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ೨೪ ಗಂಟೆಯಲ್ಲಿ ೧೮೯೭ ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ೨೭೮ ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯನ್ನು ತಿಳಿದು ಬಂದಿದೆ. ಡೆಂಗ್ಯೂ ಪಾಸಿಟಿವ್ ಹೊಂದಿದಂತ ೩೬೧ ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಡೆಂಗ್ಯೂ ಪೀಡಿತರಾದಂತ ೧೮,೯೬೬ ಜನರು ಗುಣಮುಖರಾಗಿದ್ದಾರೆ ಎಂದು ಹೇಳಿದೆ.
ಅಂದಹಾಗೇ ರಾಜ್ಯಾಧ್ಯಂತ ಇದುವರೆಗೆ ೧೪,೩೭,೭೨೦ ಮಂದಿಯನ್ನು ಡೆಂಗ್ಯೂ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ೨೦,೭೨೯ ಜನರಿಗೆ ಡೆಂಗ್ಯೂ ಪರೀಕ್ಷೆಯಲ್ಲಿ ಪಾಸಿಟಿವ್ ಅಂತ ತಿಳಿದು ಬಂದಿತ್ತು. ಸದ್ಯ ಆಸ್ಪತ್ರೆಗಳಲ್ಲಿ ೨೭೪ ಜನರು ಚಿಕಿತ್ಸೆಗಾಗಿ ದಾಖಲಾಗಿ, ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.