ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ: ಡೆಂಗ್ಯೂ ಜ್ವರ ಸೊಳ್ಳೆಯಿಂದ ವ್ಯಕ್ತಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿರಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ವಿಶ್ವನಾಥ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಕಣಗಾಲು ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಶುಕ್ರವಾರ ಹಮ್ಮಿಕೊಂಡಿದ್ದ, ಡೆಂಘೆ ವಿರೋಧಿ ಮಾಸಚಾರಣೆಯ ಅರಿವು ಮಕ್ಕಳ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಸ್ತುಗಳು ನೀರಿನಲ್ಲಿ ಸೇರಿಕೊಳ್ಳುವುದರಿಂದ ನೀರು ಮಲಿನಗೊಳ್ಳುತ್ತದೆ.
ಹರಿಯದೆ ಒಂದೆ ಕಡೆಯಲ್ಲಿ ನಿಂತು ಮಲಿನಗೊಂಡ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಇವು ಕಚ್ಚುವುದರಿಂದ ಈ ಜ್ವರ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಎಲ್ಲೆಡೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ನೈರ್ಮಲ್ಯವಾಗಿ ಇಟ್ಟುಕೊಂಡರೆ ನಾವು ಆರೋಗ್ಯವಾಗಿ ಜೀವಿಸಬಹುದು. ಅಲ್ಲದೇ ಯಾವುದೇ ಜ್ವರ ಸೇರಿದಂತೆ ಅರೋಗ್ಯ ಸಮಸ್ಯೆ ಕಂಡು ಬಂದರೆ ಸಮೀಪದ ಅರೋಗ್ಯ ಕೇಂದ್ರಕ್ಕೆ ಭೇಟಿ ವೈದ್ಯರ ಸಲಹೆ ಪಡೆಯಿರಿ ಎಂದರು.
ಈ ಸಂದರ್ಭದಲ್ಲಿ ಕಣಗಾಲು ಗ್ರಾ.ಪಂ ಅಧ್ಯಕ್ಷೆ ಮೈಮುನ್ನೀಸಾ, ಸದಸ್ಯ ಕುಮಾರಶೆಟ್ಟಿ, ಆರೋಗ್ಯ ಸುರಕ್ಷಾಧಿಕಾರಿಗಳಾದ ದಿವ್ಯರಾಣಿ, ಸವಿತ ಸೇರಿದಂತೆ ಸರ್ಕಾರಿ ಪ್ರೌಢಶಾಲಾ ಮಕ್ಕಳು ಹಾಗೂ ಶಿಕ್ಷಕರು ಇದ್ದರು.