Monday, April 21, 2025
Google search engine

Homeಅಪರಾಧಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

ಮೈಸೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಈಚೆಗೆ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.ಪ್ರಭಾಕರ ಭಟ್ ಪರ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ವಾದಿಸಿದರು. ರಾಜಕೀಯ ದುರುದ್ದೇಶದಿಂದ ದಾಖಲಿಸಿಕೊಳ್ಳಲಾದ ಪ್ರಕರಣವಾಗಿದೆ. ನ್ಯಾಯಾಲಯದ ಅನುಮತಿ ಪಡೆಯದೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ . ಅರ್ಜಿದಾರರು ಕಾನೂನು ಪಾಲಕರಾಗಿದ್ದು,ಆರೋಪಿಸಿರುವ ಯಾವುದೇ ತಪ್ಪು ಎಸಗಿಲ್ಲ ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ಅದರಂತೆ ಮಧ್ಯಾಂತರ ತಡೆ ನೀಡಿದೆ.

೨೦೨೩ರ ಡಿಸೆಂಬರ್ ೨೪ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ ಭಟ್ ಮಾತನಾಡಿದ್ದರು. ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ ಎಂಬ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಇದರ ವಿರುದ್ದ ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ೨೦೨೩ರ ಡಿಸೆಂಬರ್ ೨೬ರಂದು ದೂರು ನೀಡಿದ್ದರು.

RELATED ARTICLES
- Advertisment -
Google search engine

Most Popular