Monday, April 21, 2025
Google search engine

Homeರಾಜ್ಯಸುದ್ದಿಜಾಲಕೃಷಿ ಇಲಾಖೆ: ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ

ಕೃಷಿ ಇಲಾಖೆ: ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ

ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿಯನ್ನು ಪ್ರಾರಂಭಿಸಿದ್ದು, ರೈತರು ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿದೇರ್ಶಕ ದಯಾನಂದ ಅವರು ತಿಳಿಸಿದ್ದಾರೆ.

ಆ.16 ರಂದು ವಿವಿಧ ಬೆಳೆ ವಿಮೆ ನೋಂದಣಿಗೆ ಕೊನೆಯ ದಿನವಾಗಿದ್ದು, ರಾಗಿ (ಮ), ನವಣೆ (ಮ), ಹುರುಳಿ (ಮ), ನೆಲಗಡಲೆ (ನೀ/ಮ), ಸಜ್ಜೆ (ನೀ,ಮ), ತೊಗರಿ (ಮ), ಭತ್ತ (ನೀ,ಮ) ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಹಾಗೂ ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕಕೇAದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಯ ಮೊ.8277472721 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular