Thursday, April 3, 2025
Google search engine

Homeರಾಜ್ಯದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಜುಲೈ ಮತ್ತು ಆಗಸ್ಟ್ ತಿಂಗಳ ಹಣ ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ಜುಲೈ ತಿಂಗಳ ಹಣ ಅ.೦೭ ರಂದು ಮತ್ತು ಆಗಸ್ಟ್ ತಿಂಗಳ ಹಣ ಅ.೦೯ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ. ೧ ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಇದೀಗ ರಾಜ್ಯದೆಲ್ಲೆಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಈ ಮಧ್ಯೆ ಬಾಕಿ ಇರುವ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ. ಹೀಗಿರುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿರುವ ಭರವಸೆಯಿಂದಾಗಿ ಸರ್ಕಾರದ ವಿರುದ್ಧ ಮಹಿಳೆಯರ ಮುನಿಸು ತಣ್ಣಗಾಗಿದೆ.

RELATED ARTICLES
- Advertisment -
Google search engine

Most Popular