ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಹಾಗೂ ಪುತ್ರಿ ಐಶ್ವರ್ಯ ಹಾಗೂ ಪುತ್ರ ಆಕಾಶ್ ಕೆಂಪೇಗೌಡ ಸೇರಿದಂತೆ ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದರು.
ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ ಶ್ರೀನಾಥ್ ಬಾಬು, ಜಿ ರಾಘವೇಂದ್ರ, ಕಿಶೋರ್ ಕುಮಾರ್, ಕಿರಣ್, ಸುಬ್ಬಣ್ಣ, ಹರೀಶ್ ನಾಯ್ಡು, ಹಾಗೂ ಇನ್ನಿತರರು ಹಾಜರಿದ್ದರು.