Wednesday, July 1, 2026
Google search engine

Homeಸ್ಥಳೀಯಎಸ್‌ ಐ ಆರ್‌ ಪ್ರಕ್ರಿಯೆ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಶ್ರೀರೂಪ

ಎಸ್‌ ಐ ಆರ್‌ ಪ್ರಕ್ರಿಯೆ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ : ಜಿಲ್ಲೆಯಲ್ಲಿ ಆರಂಭಗೊಂಡಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ ಐಆರ್) ಹಿನ್ನೆಲೆಯಲ್ಲಿ ಹಲವು ಗ್ರಾಮಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ ನೀಡಿ ಎಸ್‌ ಐಆರ್ ಪ್ರಕ್ರಿಯೆ ಕಾರ್ಯವನ್ನು ಪರಿಶೀಲಿಸಿದರು.

ಚಾಮರಾಜನಗರ ತಾಲೂಕಿನ ಉಡಿಗಾಲ, ಹರವೆ ಹೋಬಳಿ, ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ, ತ್ರಿಯಂಬಕಪುರ ಸೇರಿದಂತೆ ಇತರೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಪ್ರಕ್ರಿಯೆಯಲ್ಲಿ ತೊಡಗಿರುವ ಬಿಎಲ್‌ಒಗಳಿಂದ ಮಾಹಿತಿ ಪಡೆದುಕೊಂಡರು.ಅಲ್ಲದೇ ಮನೆಗಳಿಗೆ ತೆರಳಿ ಮತದಾರರಿಗೆ ಅರಿವು ಮೂಡಿಸಿ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸಬೇಕು. ಆ ಮೂಲಕ ಯಾರೊಬ್ಬರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಮನೆಗಳಿಗೆ ಬಿಎಲ್‌ಒಗಳು ಭೇಟಿ ನೀಡಿದ ವೇಳೆ ಭರ್ತಿ ಮಾಡಿದ ಎನ್ಯುಮರೇಷನ್ ಫಾರ್ಮ್ ಅನ್ನು ಕೊಡುತ್ತಾರೆ. ಅದನ್ನು ಪರಿಶೀಲಿಸಿ ಸರಿ ಇದ್ದರೆ ಸಹಿ ಹಾಕಿ ವಾಪಸ್ಸು ಕೊಡಬೇಕು. ಹಿಂದಿನ ಎಸ್‌ಐಆರ್‌ನ ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಒದಗಿಸಬೇಕು ಎಂದು ಸೂಚಿಸಿದರು.ಈ ಸಂದರ್ಭದಲ್ಲಿ ಚಾಮರಾಜನಗರ ತಹಸೀಲ್ದಾರ್ ಗಿರಿಜಾ, ಗುಂಡ್ಲುಪೇಟೆ ತಹಶೀಲ್ದಾರ್ ತನ್ಮಯ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular