Monday, April 21, 2025
Google search engine

Homeಅಪರಾಧಕರ್ತವ್ಯ ಲೋಪ : ಸೆಸ್ಕ್ ಎಂಡಿ ಅಮಾನತು

ಕರ್ತವ್ಯ ಲೋಪ : ಸೆಸ್ಕ್ ಎಂಡಿ ಅಮಾನತು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹಾಜರಿಲ್ಲದೇ ಕರ್ತವ್ಯ ಲೋಪ ಎಸಗಿದ, ಶಿಷ್ಟಾಚಾರ ಉಲ್ಲಂಘಿಸಿದ ಹಾಗೂ ಮುಜುಗರಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಇಲ್ಲಿನ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ್ (ಕೆಎಎಸ್, ಸೂಪರ್ ಟೈಂ ಸ್ಕೇಲ್) ಅವರನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನ ಮುಳುಸೋಗೆ ಬಳಿ ಕಾವೇರಿ ನದಿಯಿಂದ ನೀರೆತ್ತಿ ೭೯ ಗ್ರಾಮಗಳಲ್ಲಿ ಬರುವ ೧೫೦ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಬಂದಿದ್ದರು. ಅವರು ಬಟನ್ ಒತ್ತಿದಾಗ ಯಂತ್ರ ಚಾಲನೆ ಪಡೆದಿರಲಿಲ್ಲ. ಇದರಿಂದ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು ಹಾಗೂ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡಿದ್ದರು.

ವ್ಯವಸ್ಥಿತವಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರಿಯಾಗದೇ ಕರ್ತವ್ಯದಲ್ಲಿ ಅಸಡ್ಡೆ ಹಾಗೂ ನಿರ್ಲಕ್ಷ್ಯದಿಂದ ಸರ್ಕಾರವನ್ನು ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಗೆ ನೇರ ಕಾರಣವಾದ್ದರಿಂದ ಅವರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಧಿಕಾರಿಯು ಅಮಾನತಿನ ಅವಧಿಯಲ್ಲಿ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಅವರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶಿಸಲಾಗಿದೆ.

RELATED ARTICLES
- Advertisment -
Google search engine

Most Popular