Friday, April 4, 2025
Google search engine

Homeಅಪರಾಧಕಾನೂನುಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ: ಚನ್ನಳ್ಳಿ ಗ್ರಾಪಂ ಕಾರ್ಯದರ್ಶಿ ಅಮಾನತು

ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ: ಚನ್ನಳ್ಳಿ ಗ್ರಾಪಂ ಕಾರ್ಯದರ್ಶಿ ಅಮಾನತು

ಹಾವೇರಿ: ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯಲೋಪ ಎಸಗಿದ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತು ಮಾಡಿ ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಆದೇಶಿಸಿದ್ದಾರೆ.

ಹಿರೇಕೆರೂರು ತಾಲೂಕಿನ ಚನ್ನಳ್ಳಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕೆ.ಪಿ.ಮಾನೆ ಅಮಾನತಾದವರು.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ಸಮೀಕ್ಷೆಯಡಿ ದೂದಿಹಳ್ಳಿ ಗ್ರಾಮದ ಸಮೀಕ್ಷೆ ವೇಳೆ ಕರ್ತವ್ಯಲೋಪ ಎಸಗಿದ್ದರಿಂದ ಕೆ.ಪಿ.ಮಾನ್ ಅವರನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಜಿಲ್ಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾಗಿದ್ದ ಪಿಡಿಒ ಕರ್ತವ್ಯಲೋಪ ಎಸಗಿರುವುದು ದುರಾದೃಷ್ಟಕರ. ಭವಿಷ್ಯದಲ್ಲಿ ಉಳಿದ ಅಧಿಕಾರಿಗಳು ಕರ್ತವ್ಯಲೋಪ ಎಸಗದಂತೆ ಎಚ್ಚರಿಕೆ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular