Monday, December 2, 2024
Google search engine

Homeಅಪರಾಧಕಾನೂನುಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ವಿರುದ್ಧ ಸುಮೊಟೊ ಕೇಸ್ ದಾಖಲು

ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ವಿರುದ್ಧ ಸುಮೊಟೊ ಕೇಸ್ ದಾಖಲು

ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ವಿರುದ್ಧ ಇದೀಗ ಶಿವಮೊಗ್ಗ ನಗರದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಹೌದು ಸಾಮಾಜಿಕ ಜಾಲತಾಣಗಳದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಮೋಹಿತ್ ಎನ್ನುವ ವ್ಯಕ್ತಿ ಸಚಿವ ಮಧು ಬಂಗಾರಪ್ಪ ಅವರ ಬಗ್ಗೆ ಎಕ್ಸ್ ಮತ್ತು ಇನ್‍ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದವನ ವಿರುದ್ಧ ವಿನೋಬ ನಗರ ಪೊಲೀಸ್‌ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.

ಸಚಿವ ಮಧು ಬಂಗಾರಪ್ಪರವರ ಹೇಳಿಕೆಯೊಂದನ್ನ ಆಧರಿಸಿ, ಅವರ ವಿರುದ್ದ ವೈಯಕ್ತಿಕ ನಿಂದನೆ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದರು. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯ ಕುರಿತು ಏಕವಚನದಲ್ಲಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹಾಗೂ ಸರ್ಕಾರದ ಯೋಜನೆಯ ವಿರುದ್ಧವಾಗಿ ಸುಳ್ಳು ಮಾಹಿತಿ ಪ್ರಸಾರ ಮಾಡಿ ಸಾರ್ವಜನಿಕರನ್ನು ಸರ್ಕಾರದ ವಿರುದ್ಧ ದಂಗೆ ಏಳಿಸುವ ಪ್ರಚೋದಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular