ಮೈಸೂರು : ಮೈಸೂರಿನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ನಿಂದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಪ್ರಮುಖ ರೂವಾರಿಯೇ ಪ್ರತಾಪ್ ಸಿಂಹ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರತಾಪ್ ಸಿಂಹ ಅವರನ್ನು ತನಿಖೆ ಮಾಡುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಆರೋಪಿ ಸುರೇಶ್ ಪ್ರತಾಪ್ ಸಿಂಹನ ಬಂಟನಾಗಿದ್ದಾನೆ. ಮೈಸೂರಿನ ಶಾಂತಿ ಕೆಡಿಸುವುದರಲ್ಲಿ ಪ್ರತಾಪಸಿಂಹನ ಕೈವಾಡವಿದೆ. ಇಬ್ಬರನ್ನು ತನಿಖೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.