ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.
ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ದಾಖಲಿಸಿದ್ದರು. ನವೆಂಬರ್ 28ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿದೇಶಕ್ಕೆ ಹೋದಾಗ ರಾಹುಲ್ ಗಾಂಧಿ ನೀಡಿದ ಕೆಲವು ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಶಾಸಕ ಯತ್ನಳ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.