ಮಂಗಳೂರು(ದಕ್ಷಿಣ ಕನ್ನಡ): ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರೋ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.