ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಮಹೋತ್ಸವಕ್ಕೆ ನಿನ್ನೆ ಚಾಮುಂಡಿ ಬೆಟ್ಟದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ನಿನ್ನೆಯಿಂದ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಗತಕಾಲದ ವೈಭವವನ್ನು ಮರುಕಳಿಸಿದೆ. ಇಂದು ದಸರಾ ಸಂಭ್ರಮ ಎರಡನೇ ದಿನಕ್ಕೆ ಕಾಲಿಟ್ಟಿದ್ದು ದಸರಾ ಅಂಗವಾಗಿ ಇಂದು ನಡೆಯುವ ಕಾರ್ಯಕ್ರಮಗಳ ವಿವರ ಇಲ್ಲಿದೆ.
ಅ.೧೬ ವಿವಿಧ ದಸರಾ ಕಾರ್ಯಕ್ರಮದ ವಿವರ: ಬೆಳಗ್ಗೆ ೬.೩೦ಕ್ಕೆ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಮೀಣ ಯೋಗ & ಸಾಮೂಹಿಕ ಯೋಗಾಭ್ಯಾಸ ನಡೆಯಲಿದೆ. ಶಾಸಕ ದರ್ಶನ್ ಧ್ರುವನಾರಾಯಣ ಯೋಗಾಭ್ಯಾಸ ಉದ್ಘಾಟಿಸಲಿದ್ದಾರೆ. ಬೆಳಗ್ಗೆ ೯.೩೦ಕ್ಕೆ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಅಂಬಾವಿಲಾಸ ಅರಮನೆ ಎದುರು ನಡೆಯುವ ರಂಗೋಲಿ ಸ್ಪರ್ಧೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಜೆ.ಕೆ.ಗ್ರೌಂಡ್‌ನಲ್ಲಿ ಬೆಳಗ್ಗೆ ೧೧ ಗಂಟೆಗೆ ಮಹಿಳಾ ದಸರಾ-೨೦೨೩ಕ್ಕೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಲಿದ್ದಾರೆ. ಹಾಗೂ ವಸ್ತು ಪ್ರದರ್ಶನ & ಮಾರಾಟ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
ಅ.೧೭ ವಿವಿಧ ದಸರಾ ಕಾರ್ಯಕ್ರಮದ ವಿವರ: ಬೆಳಗ್ಗೆ ೧೧ಕ್ಕೆ ಲಲಿತ ಕಲೆ & ಕರಕುಶಲ, ಮಕ್ಕಳು ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದ್ದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ ಮಹದೇವಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಗರದ ಕರ್ನಾಟಕ ಕಲಾಮಂದಿರ ಹೊರ ಆವರಣದಲ್ಲಿ ಸ್ಪರ್ಧೆ ನಡೆಯಲಿದೆ. ಕರ್ನಾಟಕ ಕಲಾಮಂದಿರ ಒಳ ಆವರಣದಲ್ಲಿ ಬೆ.೧೧.೩೦ಕ್ಕೆ ಕಾವ್ಯ ಸಂಭ್ರಮ, ಹಾಸ್ಯ-ಮಟುಕು-ಜಾನಪದ ಕಾರ್ಯಕ್ರಮ ನಡೆಯಲಿದ್ದು ಪ್ರಸಿದ್ಧ ಕವಿ ಜಯಂತ ಕಾಯ್ಕಿಣಿ ಉದ್ಘಾಟಿಸಲಿದ್ದಾರೆ.
ಅ.೧೮ ವಿವಿಧ ದಸರಾ ಕಾರ್ಯಕ್ರಮದ ವಿವರ: ಬೆಳಗ್ಗೆ ೧೧ಗಂಟೆಗೆ ಮಾನಸ ಗಂಗೋತ್ರಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಿಗುರು ಕವಿಗೋಷ್ಠಿ ಮತ್ತು ಮಹಿಳಾ ಕವಿಗೋಷ್ಠಿ ನಡೆಯಲಿದ್ದು ಖ್ಯಾತ ಕವಯತ್ರಿ ಸವಿತಾ ನಾಗಭೂಷಣ್‌ರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಬೆಳಗ್ಗೆ ೧೧ ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಮಕ್ಕಳ ದಸರಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪ್ರಾಥಮಿ&ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಲಿದ್ದಾರೆ.