Friday, April 18, 2025
Google search engine

Homeರಾಜ್ಯಸುದ್ದಿಜಾಲಹದಗೆಟ್ಟ ಕೆಪಿಟಿ-ನಂದೂರು ಜಂಕ್ಷನ್ ರಸ್ತೆ; ದ.ಕ. ಜಿಲ್ಲಾಧಿಕಾರಿ ಭೇಟಿ,ಪರಿಶೀಲನೆ

ಹದಗೆಟ್ಟ ಕೆಪಿಟಿ-ನಂದೂರು ಜಂಕ್ಷನ್ ರಸ್ತೆ; ದ.ಕ. ಜಿಲ್ಲಾಧಿಕಾರಿ ಭೇಟಿ,ಪರಿಶೀಲನೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಪ್ರಮುಖ ಜಂಕ್ಷನ್‌ಗಳಾದ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೊಳಪಡುವ ಕೆಪಿಟಿ ಹಾಗೂ ನಂತೂರು ಜಂಕ್ಷನ್ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ವಾಹನದಟ್ಟನೆಯಿಂದ ಕೂಡಿರುವ ಈ ಜಂಕ್ಷನ್ ಗಳಲ್ಲಿ ಬೃಹತ್ ಗಾತ್ರದ ಹೊಂಡಗುಂಡಿಗಳಿಂದಾಗಿ ವಾಹನಗಳು ಸಂಚಾರಕ್ಕೆ ತೊಂದರೆ ಪಡುವ, ದ್ವಿಚಕ್ರ ಸವಾರರು ಅತ್ಯಂತ ಅಪಾಯಕಾರಿಯಾಗಿ ಈ ರಸ್ತೆಗಳಲ್ಲಿ ಸಂಚರಿಸಬೇಕಾದ ಪರಿಸ್ಥಿಯನ್ನು ಗಮನಿಸಿದ ಜಿಲ್ಲಾಧಿಕಾರಿ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಂಡು ರಸ್ತೆಯನ್ನು ವಾಹನ ಸಂಚಾರ ಯೋಗ್ಯವನ್ನಾಗಿಸಲು ಸೂಚಿಸಿದರು.

RELATED ARTICLES
- Advertisment -
Google search engine

Most Popular