ಮಂಡ್ಯ: ಹದಗೆಟ್ಟ ರಸ್ತೆಗಳಿಂದಾಗಿ ಗ್ರಾಮಸ್ಥರ ಗೋಳು ಹೇಳತೀರದಾಗಿದ್ದು, ರಸ್ತೆಯಲ್ಲಿ ರಾಗಿ ನಾಟಿ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ನಿರಂತರ ಮಳೆಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದ ರಸ್ತೆ ಕೆಸರಿನ ಗದ್ದೆಯಂತಾಗಿದ್ದು, ರಸ್ತೆಯಲ್ಲಿ ರಾಗಿ ನಾಟಿ ಹಾಕುವ ಮೂಲಕ ಗ್ರಾಮಸ್ಥರ ಪ್ರತಿಭಟಿಸಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಓ ಬೇಜವಾಬ್ದಾರಿತನದಿಂದ ಗ್ರಾಮದ ಜನರು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದಾರೆ.
ಹದಗೆಟ್ಟ ಕೊಳಕು ರಸ್ತೆಯ ಮೇಲೆ ದಿನನಿತ್ಯ ಶಾಲಾ ಮಕ್ಕಳು, ವಯೋವೃದ್ಧರು ಓಡಾಡುತ್ತಿದ್ದಾರೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ,ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅವುಗಳ ತಡೆಗಟ್ಟಲು ರಾಜ್ಯ ಸರ್ಕಾರ ಪ್ರತಿ ಗ್ರಾಮಗಳಲ್ಲು ಜಾಗೃತಿ ಮೂಡಿಸಬೇಕು ಎಂದು ಸುತ್ತೋಲೆ ಹೊರಡಿಸಿದರು. ಮಾಕವಳ್ಳಿ ಗ್ರಾ.ಪಂಯಿಂದ ಗ್ರಾಮದಲ್ಲಿ ಇದುವರೆಗೂ ಒಂದು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಿಲ್ಲ. ಜನರ ಜೀವಗಳ ಜೊತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹದಗೆಟ್ಟ ರಸ್ತೆಯಿಂದ ನರಕ ಅನುಭವಿಸುತ್ತಿರುವ ಜನರಿಗೆ ಸೂಕ್ತ ರಸ್ತೆ ಕಲ್ಪಿಸಿ ಕೊಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಚಂದ್ರೇಗೌಡ, ದಿನೇಶ್, ಅಜಯ್, ಪಾಪೇಗೌಡ, ಶೇಖರ್, ಶಂಕರ್ ಭಾಗಿಯಾಗಿದ್ದರು.