ಮಂಡ್ಯ: ಡಿ.ಕೆ.ಶಿವಕುಮಾರ್ 100 ಕೋಟಿ ರೂ. ಆಫರ್ ಮಾಡಿದ್ದರು ಎಂಬ ವಕೀಲ ದೇವರಾಜೇಗೌಡ ಆರೋಪ ನಿರಾಧಾರ ಎಂದು ಟ್ವೀಟ್ ಮೂಲಕ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ ಮಾಡಿದ್ದಾರೆ. ಆದರೆ ದೇವರಾಜೇಗೌಡರ ಆರೋಪ ನಿರಾಧಾರ. ದೇವರಾಜೇಗೌಡರ ಮಾತಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಪ್ರಕರಣ ಸಂಬಂಧ SIT ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತ್ರವಲ್ಲದೆ, ಸಚಿವರಾದ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹೆಸರನ್ನೂ ದೇವರಾಜೇಗೌಡ ಉಲ್ಲೇಖ ಮಾಡಿದ್ದರು.