ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನನ್ನ ವಿರುದ್ಧ ಡಾ.ಮಂಜುನಾಥ್ ಸ್ಪರ್ಧೆಯನ್ನು ಸ್ವಾಗತ ಮಾಡುತ್ತೇನೆ. ದೇವೇಗೌಡರ ಕುಟುಂಬದವರು ನನಗೆ, ಶಿವಕುಮಾರ್‌ಗೆ ಹೊಸದಲ್ಲ. ಜೆಡಿಎಸ್ ಪಕ್ಷ ಸರಿಯಿಲ್ಲವೆಂದು ಅವರ ಅಳಿಯ ಬೇರೆ ಪಕ್ಷದಿಂದ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಆಲೋಚನೆ ಮಾಡಬೇಕು ಎಂದು ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ದೇವೇಗೌಡರಿಗೆ ಜನಪ್ರಿಯತೆ ಇಲ್ಲವೆಂದು ಅವರ ಅಳಿಯ ಬೇರೆ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ, ಇದನ್ನು ಅವರು ಹೇಳಬೇಕು. ಅವರ ಪಕ್ಷ, ನಾಯಕತ್ವ ಅಸ್ತಿತ್ವದಲ್ಲಿ ಇಲ್ಲ ಎನ್ನುವುದನ್ನು ಅರಿತು ಅಳಿಯ ಈ ನಿರ್ಧಾರ ಮಾಡಿದ್ದಾರೆ ಎಂಬುದು ನನ್ನ ಭಾವನೆ ಎಂದು ನುಡಿದರು.