Friday, April 18, 2025
Google search engine

Homeರಾಜ್ಯಸುದ್ದಿಜಾಲಎಲ್ಲರೂ ಒಗ್ಗಟ್ಟಾಗಿ ಸಂಘಟಿತರಾದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ-ಶ್ರೀ ಶಿವಾನಂದ ಪುರಿ ಮಹಾಸ್ವಾಮಿ

ಎಲ್ಲರೂ ಒಗ್ಗಟ್ಟಾಗಿ ಸಂಘಟಿತರಾದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ-ಶ್ರೀ ಶಿವಾನಂದ ಪುರಿ ಮಹಾಸ್ವಾಮಿ

2024ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ

ಪಿರಿಯಾಪಟ್ಟಣ: ಎಲ್ಲರೂ ಒಗ್ಗಟ್ಟಾಗಿ ಸಂಘಟಿತರಾದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಕಾಗಿನೆಲೆ ಮೈಸೂರು ಗುರುಪೀಠದ ಶ್ರೀ ಶಿವಾನಂದ ಪುರಿ ಮಹಾಸ್ವಾಮಿಗಳು ತಿಳಿಸಿದರು.

ಪಟ್ಟಣದ ಕನಕ ಭವನದಲ್ಲಿ ಹಾಗೂ ಶ್ರೀ ಕನಕ ಸಹಕಾರ ಸಂಘ ನಿಯಮಿತ ವತಿಯಿಂದ ನಡೆದ 2024ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ತಾಲೂಕು ಕುರುಬ ಸಮಾಜ ಉತ್ತಮ ಕಾರ್ಯನಿರ್ವಹಿಸುವ ಮೂಲಕ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಗೊಂಡಿದೆ, ಸಮಾಜದವರೆಲ್ಲರೂ ಒಗ್ಗಟ್ಟಾಗಿ ಕನಕ ಸಹಕಾರ ಸಂಘ ಸ್ಥಾಪನೆ ಮಾಡಿ ಅಭಿವೃದ್ಧಿಪಥದಲ್ಲಿ ಸಾಗುತ್ತಿರುವುದು ಶ್ಲಾಘನೀಯ, ಸಮಾಜದವರೆಲ್ಲರೂ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಮುಂದುವರೆಯಲು ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ, ತಾಲೂಕು ಕುರುಬ ಸಮಾಜ ಹಲವು ಸಾಮಾಜಿಕ ಚಟುವಟಿಕೆಗಳ ಮೂಲಕ ಇತರ ಸಮಾಜಗಳಿಗೆ ಮಾದರಿಯಾಗಿದೆ ಹಾಗೂ ಅಧ್ಯಕ್ಷರಾದ ಹೆಚ್.ಡಿ ಗಣೇಶ್ ಮತ್ತು ಕಾರ್ಯದರ್ಶಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ದಿನಚರಿ ಬಿಡುಗಡೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ.

ನಮ್ಮದೇ ಸಮಾಜದ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಜನಪರ ಆಡಳಿತ ನೀಡುತ್ತಿರುವುದು ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದರು.

ತಾಲೂಕು ಕುರುಬ ಸಮಾಜ ಅಧ್ಯಕ್ಷ ಹೆಚ್‍.ಡಿ ಗಣೇಶ್ ಅವರು ಮಾತನಾಡಿ ಸಮಾಜದ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಎಲ್ಲರೂ ಕೈಜೋಡಿಸಿದಾಗ ಮಾತ್ರ ಯಶಸ್ಸು ಸಾಧ್ಯ ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದರು.

ಉಪಾಧ್ಯಕ್ಷ ಎಂ.ಎಂ ರಾಜೇಗೌಡ ಅವರು ಮಾತನಾಡಿ ಸಮಾಜ ಸಂಘದ ಜೊತೆ ನಿಂತಾಗ ಅಭಿವೃದ್ಧಿ ಸಾಧ್ಯ ಹಾಗೂ ಸಮಾಜದ ಹಿಂದುಳಿದವರು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತಂದಾಗ ಇತರರಿಗೆ ಮಾದರಿಯಾಗಬಹುದು ಎಂದರು.

ಈ ವೇಳೆ ತಾಲೂಕು ಕುರುಬ ಸಮಾಜ ಹಾಗೂ ಶ್ರೀ ಕನಕ ಸಹಕಾರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕನಕ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ದೊರೆಕೆರೆ ನಾಗೇಂದ್ರ ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳು, ತಾಲೂಕು ಕನಕ ಕುರುಬರ ಸಂಘದ ಗೌರವಾಧ್ಯಕ್ಷ ಡಿ.ಎ ಜವರಪ್ಪ, ಉಪಾಧ್ಯಕ್ಷರಾದ ರಾಜಶೇಖರ್, ಶಿವಣ್ಣ, ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಸಹ ಕಾರ್ಯದರ್ಶಿ ಜಯರಾಮ್, ಖಜಾಂಚಿ ಮಹದೇವ್, ಸಂಘಟನಾ ಕಾರ್ಯದರ್ಶಿಗಳಾದ ಮಹದೇವ್, ಮಲ್ಲಿಕಾರ್ಜುನ್, ಕಾನೂನು ಸಲಹೆಗಾರ ಕೆ ಶಂಕರ್ ಹಾಗೂ ನಿರ್ದೇಶಕರು ಸೇರಿದಂತೆ ತಾಲೂಕಿನ ವಿವಿದೆಡೆಯ ಕುರುಬ ಸಮಾಜದ 300 ಕ್ಕೂ ಹೆಚ್ಚು ಮುಖಂಡರು ಇದ್ದರು.

RELATED ARTICLES
- Advertisment -
Google search engine

Most Popular