Saturday, July 26, 2025
Google search engine

Homeರಾಜ್ಯಸುದ್ದಿಜಾಲಧರ್ಮಸ್ಥಳದ ಶವ ಪ್ರಕರಣ: ಮಂಗಳೂರಿನಲ್ಲಿ ಎಸ್‌.ಐ.ಟಿ. ಸಭೆ

ಧರ್ಮಸ್ಥಳದ ಶವ ಪ್ರಕರಣ: ಮಂಗಳೂರಿನಲ್ಲಿ ಎಸ್‌.ಐ.ಟಿ. ಸಭೆ

ಮಂಗಳೂರು (ದಕ್ಷಿಣ ಕನ್ನಡ): ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ತನಿಖೆಗೆ ರಚಿಸಲಾದ ಎಸ್.ಐ.ಟಿ. ತಂಡದ ಅಧಿಕಾರಿಗಳು ಇಂದು ಮಂಗಳೂರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸಹಿತ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಎಸ್‌ಐಟಿ ತಂಡದ ಡಿಐಜಿ ಎಂ.ಎನ್. ಅನುಚೇತ್ ಸಭೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ಧರ್ಮಸ್ಥಳದಲ್ಲಿ ನಡೆದಿರುವ ನಿಗೂಢ ಸಾವು ಪ್ರಕರಣಗಳ ತನಿಖೆಗಾಗಿ ರಚನೆಗೊಂಡಿರುವ ವಿಶೇಷ ತನಿಖಾ ತಂಡವು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಈ ತಂಡವು ತನಿಖೆ ಆರಂಭಿಸಲಿದೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular