Saturday, August 16, 2025
Google search engine

Homeರಾಜ್ಯಸುದ್ದಿಜಾಲಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಧರ್ಮಸ್ಥಳ ಚಲೋ ಅಭಿಯಾನ

ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಧರ್ಮಸ್ಥಳ ಚಲೋ ಅಭಿಯಾನ

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಯಲಹಂಕಾ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಇಂದು ಧರ್ಮಸ್ಥಳ ಚಲೋ ಅಭಿಯಾನ ನಡೆಯಲಿದ್ದು, ಈ ಅಭಿಯಾನದಲ್ಲಿ 500 ಕಾರುಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಡಲಿದ್ದಾರೆ.

ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‌ಗೇಟ್‌ನಿಂದ ಬಿಜೆಪಿ ಕಾರ್ಯಕರ್ತರು ಹೊರಡಲಿದ್ದಾರೆ. ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ, ಧರ್ಮಸ್ಥಳಕ್ಕೆ ಹೊರಡಲಿದ್ದಾರೆ. ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಸುಮಾರು 3 ಗಂಟೆಗೆ ವಿಶ್ವನಾಥ್ ತಂಡ ಧರ್ಮಸ್ಥಳ ತಲುಪಲಿದೆ. 

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿ ಪಕ್ಷದ ಶಾಸಕರೊಂದಿಗೆ ಮತ್ತೊಮ್ಮೆ ಮಂಜುನಾಥನ ವಿಶೇಷ ದರ್ಶನ ಪಡೆದು ವಾಪಸಾಗಲಿದ್ದಾರೆ.

ಹಿಂದೂ ಹಕ್ಕುಗಳನ್ನು ಎತ್ತಿಹಿಡಿಯಲು ಮತ್ತು ಕರ್ನಾಟಕದಾದ್ಯಂತ ದೇವಾಲಯದ ಪಾವಿತ್ರ್ಯವನ್ನು ರಕ್ಷಿಸಲು ಧರ್ಮಸ್ಥಳದಲ್ಲಿ ಪ್ರತಿಜ್ಞೆ ತೆಗೆದುಕೊಳ್ಳುವುದು ರ್ಯಾಲಿಯ ಪ್ರಮುಖ ಉದ್ದೇಶವಾಗಿದೆ.

ಇನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ಭಾನುವಾರ ಧರ್ಮಸ್ಥಳ ಭೇಟಿ ಮಾಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿ ಇರಲಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿಗಳನ್ನೂ ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ.

ಇನ್ನು ಈ ಬಗ್ಗೆ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ನಾವು ಪಕ್ಷದ ಪ್ರತಿನಿಧಿಗಳಾಗಿ ಅಲ್ಲಿಗೆ ಹೋಗೋದಿಲ್ಲ, ಜನಸಾಮಾನ್ಯರಂತೆ ಹೋಗುತ್ತೇವೆ, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ನಿಲ್ಲುವು ಸ್ಪಷ್ಟವಾಗಿದೆ, ಸರ್ಕಾರ ರಚಿಸಿರುವ ಎಸ್​ಐಟಿ ಆದಷ್ಟು ಬೇಗ ತನ್ನ ತನಿಖೆಯನ್ನು ಪೂರ್ತಿಗೊಳಿಸಬೇಕು, ಅದು ತನಿಖೆಯನ್ನು ವಿನಾಕಾರಣ ವಿಳಂಬಗೊಳಿಸುವಂತಿಲ್ಲ ಎಂದು ಹೇಳಿದರು.

ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ಮತ್ತು ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಬೆಳಗಾವಿ, ಹಾಸನ, ಚಿಕ್ಕೋಡಿ ಸೇರಿ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.

RELATED ARTICLES
- Advertisment -
Google search engine

Most Popular