ಬೆಂಗಳೂರು : ಧರ್ಮಸ್ಥಳದಲ್ಲಿ ರಹಸ್ಯ ಸಮಾಧಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಮಾಧ್ಯಮಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಬೆಂಗಳೂರು ಕೋರ್ಟ್ ನಿರ್ಬಂಧ ಹೇರಿದೆ.
ಧರ್ಮಸ್ಥಳದ ಮಾಜಿ ಸ್ವಚ್ಛತಾ ಕೆಲಸಗಾರ ತಾನೂ ದೇವಾಲಯದ ಮೇಲ್ವಿಚಾಕರ ಒತ್ತಾಯದ ಮೇರೆಗೆ ಹಲವು ಶವಗಳನ್ನು ಹೂತಿರುವುದಾಗಿ ಹೇಳಿದ್ದನು. ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ವಿಡಿಯೋಗಳು ಪ್ರಸಾರವಾಗದ್ದವು. ಈ ಹಿನ್ನೆಲೆಯಲ್ಲಿ ಹರ್ಷೇಂದ್ರ ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದು ಸ್ವಚ್ಛತ ಕೆಲಸಗಾರ ನನ್ನ ಮತ್ತು ಕುಟುಂಬದವರ ಹೆಸರನ್ನು ಎಲ್ಲೂ ಹೇಳಿಲ್ಲ. ಹೀಗಿದ್ದರೂ ನಮ್ಮ ತೇಜೋವಧೆ ಮಾಡಲಾಗುತ್ತಿದೆ ಎಂದು ಕೋರ್ಟ್ ಮುಂದೆ ಅಲವತ್ತುಕೊಂಡಿದ್ದರು.
ಈ ಮಧ್ಯೆ, ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ೨೦೦೩ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.