ಮಂಡ್ಯ: ಮಂಡ್ಯದಲ್ಲಿ ರೈತರ ಹೋರಾಟ ಮುಂದುವರೆದಿದ್ದು, ಶ್ರೀರಂಗಪಟ್ಟಣದ ಪಟ್ಟಣದ ಕುವೆಂಪು ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.
ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಡೆ ಖಂಡಿಸಿ ಧರಣಿ ನಡೆಸಲಾಗುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ನಾಳಿನ ಸಭೆಯತ್ತ ರೈತರ ಚಿತ್ತ ನೆಟ್ಟಿದೆ. ಸಭೆ ತೀರ್ಪಿನ ಬಳಿಕ ದೊಡ್ಡ ಮಟ್ಟದ ಹೋರಾಟದ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.
ಪ್ರಾಧಿಕಾರಕ್ಕೆ ಸರಿಯಾದ ಮಾಹಿತಿ ನೀಡಿ ಮನವರಿಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.