ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್, ಬ್ಯಾಟರ್ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ನೇಮಕ ಮಾಡಲಾಗಿದೆ.
ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಆರ್ಸಿಬಿಗೆ ಮರಳಿದ್ದಾರೆ. ಡಿಕೆ ಆರ್ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್ಸಿಬಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.