Friday, April 11, 2025
Google search engine

Homeರಾಜ್ಯಸುದ್ದಿಜಾಲಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ-ಮಾಜಿ ಶಾಸಕ ಮೊಯ್ದಿನ್ ಬಾವ

ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ-ಮಾಜಿ ಶಾಸಕ ಮೊಯ್ದಿನ್ ಬಾವ

ಮಂಗಳೂರು (ದಕ್ಷಿಣ ಕನ್ನಡ): ನಾನು ಈಗ ಜೆಡಿಎಸ್ ನಲ್ಲಿ‌ಇದ್ದೇನೆ. ಬಿಜೆಪಿಗೂ ಬೆಂಬಲ ನೀಡುತ್ತೇನೆ. ಆದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.

ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವ ನಿಟ್ಟಿನಲ್ಲಿ ನನ್ನ ಬೆಂಬಲಿಗರು ಇಚ್ಛೆ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ನಿರ್ಧಾರ ಇನ್ನೂ ಮಾಡಿಲ್ಲ. ಮಾ.28ರಂದು ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದವರು ಹೇಳಿದರು.

ಕಾಂಗ್ರೆಸ್ ನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಲು ಪಕ್ಷದ ರಾಜ್ಯಾಧ್ಯಕ್ಷರೇ ಕಾರಣ ಎಂದು ದೂರಿದ ಮೊಯ್ದಿನ್ ಬಾವ, ಶಾಸಕರೇ ಆಗಿದ್ದ ಬಿಜೆಪಿಯ ಜಗದೀಶ್ ಶೆಟ್ಟರ್ ಅವರನ್ನು ಹೆಲಿಕಾಪ್ಟರ್ಗಳ ಮೂಲಕ ಬರ ಮಾಡಿಕೊಂಡಿದ್ದ ಕಾಂಗ್ರೆಸ್, ಅದೇ ಸಂದರ್ಭದಲ್ಲಿ ನಾನು ಉಪವಾಸವಿದ್ದರೂ ಟಿಕೆಟ್ ಬಯಸಿ ಪಕ್ಷದ ನಾಯಕರನ್ನು ಕಾಯುತ್ತಿದ್ದರೂ ನನ್ನನ್ನು ಕರೆದು ಮಾತನಾಡುವ ಸೌರ್ಜನ್ಯ ತೋರಿಸಲಿಲ್ಲ.

ಹಾಗಾಗಿ ನಾನು ಪಕ್ಷ ತೊರೆದು ಜೆಡಿಎಸ್ ಸೇರುವ ಅನಿರ್ವಾಯತೆ ಎದುರಾಯಿತು. ಆ ಸಂದರ್ಭ ನಾನು ಜೆಡಿಎಸ್ನಿಂದ ಸ್ಪರ್ಧಿಸಲು ಮುಂದಾದೆ. ನನ್ನ ಬೆಂಬಲಿಗರು ಪಕ್ಷೇತರನಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. ಆದರೆ ನಾನು ಆ ಸಂದರ್ಭ ತಪ್ಪು ಮಾಡಿದ್ದೆ. ಈ ಬಾರಿ ಬೆಂಬಲಿಗರ ಸಲಹೆಯಂತೆ ಮುಂದುವರಿಯಲಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular