ದೇವನಹಳ್ಳಿ: . ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದುರು. ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಡ್ಯ ಬಂದ್ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದರು. ನಿನ್ನೆ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು.
ನಮ್ಮಲ್ಲಿ ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ನಾಡಿನ ಜನತೆ ಹಿತರಕ್ಷಣೆ ದೃಷ್ಟಿಯಿಂದ ಕೆಲ ವಿಷಯಗಳು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಕೆಲವು ವಿಷಯಗಳಲ್ಲಿ ನಮ್ಮ ನಡುವೆ ಆಗಿರುವ ಸಮಸ್ಯೆಗಳ ಪರಿಹಾರಗಳ ಬಗ್ಗೆ ಚಿಂತನೆ ಮಾಡಿದ್ದೇವೆ. ಆ ಹಿನ್ನೆಲೆಯಲ್ಲಿ ಮೈತ್ರಿ ಮುಂದುವರೆಸಬೇಕು ಎಂಬುದು ನಮ್ಮ ಪ್ರಮುಖ ಅಂಶ. ನಮ್ಮ ನಡುವೆ ಯಾವುದೇ ರೀತಿಯ ಪ್ರತಿಷ್ಠೆಗಳಿಲ್ಲ. ಅವರು ಸಹ ಹಳೆಯ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು.
ಮಂಡ್ಯ ಬಂದ್ ವಿಚಾರ ಕುರಿತು ಮಾತನಾಡಿದ ಅವರು, ನಾನು ಸಹ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಬೆಂಬಲ ಕೊಟ್ಟಿದ್ದೇವೆ. ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ. ಅಮಿತ್ ಶಾ ಜೊತೆ ಕಾವೇರಿ ವಿವಾದದ ಬಗ್ಗೆ ಚರ್ಚೆ ಮಾಡಿದ್ದೇನೆ. ಕಾವೇರಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ತಿಳಿಸಿದ್ದೇನೆ. ನೀರಾವರಿ ವಿಚಾರದಲ್ಲಿ ಆಗಿರುವ ಸಮಸ್ಯೆಗಳಿಗೆ ಮೈತ್ರಿಯಿಂದ ಶಾಶ್ವತ ಪರಿಹಾರ ತರುವ ಸಂಕಲ್ಪ ಹೊಂದಿದ್ದೇವೆ ಎಂದು ಹೇಳಿದರು.