Friday, April 4, 2025
Google search engine

HomeUncategorizedರಾಷ್ಟ್ರೀಯವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್

ವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್

ಪುಣೆ: ಹಿಂಸಾಚಾರ ಪೀಡಿತ ಮಣಿಪುರದ ಸದ್ಯದ ಪರಿಸ್ಥಿತಿ ಸೇರಿದಂತೆ ದೇಶವನ್ನು ಕಾಡುತ್ತಿರುವ ವಿವಿಧ ಪ್ರಮುಖ ವಿಷಯಗಳನ್ನು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರೋಧಿ ರಂಗ ರಚನೆಗೆ ಮಾರ್ಗಸೂಚಿ ರೂಪಿಸಲು ಶುಕ್ರವಾರ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಉನ್ನತ ನಾಯಕರು ಸಭೆ ನಡೆಸಲಿದ್ದಾರೆ.

ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಜೆಡಿಯು) ಮತ್ತು ಅವರ ಉಪನಾಯಕ ತೇಜಸ್ವಿ ಯಾದವ್ (ಆರ್‌ಜೆಡಿ) ಆಯೋಜಿಸಿದ್ದಾರೆ.

ಪವಾರ್ ಹೊರತುಪಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಟಿಎಂಸಿ), ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ (ಎಎಪಿ), ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ (ಡಿಎಂಕೆ), ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (ಶಿವಸೇನೆ-ಯುಬಿಟಿ) ಸಭೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

ಪಾಟ್ನಾಗೆ ತೆರಳುವ ಮುನ್ನ ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಮಣಿಪುರದ ಪರಿಸ್ಥಿತಿ ಸೇರಿದಂತೆ ದೇಶ ಎದುರಿಸುತ್ತಿರುವ ಕೆಲವು ಪ್ರಮುಖ ಸಮಸ್ಯೆಗಳನ್ನು ನಾವು ಚರ್ಚಿಸುತ್ತೇವೆ. ಜನರು ಬೀದಿಗಿಳಿದು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವಂತ ಘಟನೆಗಳು ನಡೆಯುತ್ತಿವೆ. ವಿಶೇಷವಾಗಿ ಬಿಜೆಪಿಯೇತರ ರಾಜ್ಯಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಹೇಳಿದರು.

ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿದೆ ಮತ್ತು ಇದು ದೇಶಕ್ಕೆ ಒಳ್ಳೆಯದಲ್ಲ. ಸಭೆಯ ಗಮನವು ಈ ವಿಷಯಗಳ ಬಗ್ಗೆ ಚರ್ಚಿಸುವುದು ಮತ್ತು ಭವಿಷ್ಯದ ಯೋಜನೆಯನ್ನು ರೂಪಿಸುವುದು. ಇತರ ರಾಜ್ಯಗಳ ನಾಯಕರು ತಮ್ಮ ಕಳವಳವನ್ನು ವ್ಯಕ್ತಪಡಿಸಬಹುದು ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular