Saturday, April 19, 2025
Google search engine

Homeರಾಜ್ಯಸುದ್ದಿಜಾಲಎಸ್ ಸಿ -ಎಸ್ ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಚರ್ಚೆ-ಶಾಸಕ ಡಿ.ರವಿಶಂಕರ್

ಎಸ್ ಸಿ -ಎಸ್ ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಚರ್ಚೆ-ಶಾಸಕ ಡಿ.ರವಿಶಂಕರ್

ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಸಮಾರಂಭ

ಕೆ.ಆರ್.ನಗರ: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಕಳೆದ ೫ ವರ್ಷಗಳಿಂದ ಮಂಜೂರಾಗದ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಕೊಡಿಸಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಪುರಸಭೆಯ ಬಯಲು ರಂಗ ಮಂದಿರದಲ್ಲಿ ತಾಲೂಕು ಆಡಳಿತ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಮತ್ತು ವಾಲ್ಮೀಕಿ ನಾಯಕ ಸಂಘಟನೆಗಳ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಖಾಲಿ ಇರುವ ೨.೫ ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂಬ ಉದ್ದೇಶ ಹೊಂದಲಾಗಿದ್ದು ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದರ ಜತೆಗೆ ಖುದ್ದಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೊoದಿಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು. ಪರಿಶಿಷ್ಟ ಪಂಗಡ ಮತ್ತು ಜಾತಿಯವರು ಆರ್ಥಿಕವಾಗಿ ಸಬಲರಾಗಬೇಕೆಂಬ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸರ್ಕಾರಿ ಕಾಮಗಾರಿ ಮಾಡಲು ಗುತ್ತಿಗೆಯಲ್ಲಿ ಮೀಸಲಾತಿ ಜಾರಿಗೆ ತಂದು ಅನುಕೂಲ ಕಲ್ಪಿಸಿದೆ ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸ್ಮರಿಸಬೇಕು ಎಂದರು.
ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ೧೮ ವಾಲ್ಮೀಕಿ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಕೊಡಿಸಲಾಗಿದ್ದು ಮುಂದುವರೆದ ಕಾಮಗಾರಿಗೆ ಅಗತ್ಯ ಹಣ ಬಿಡುಗಡೆ ಮಾಡಿಸಿ ಭವನಗಳನ್ನು ಲೋಕಾರ್ಪಣೆ ಮಾಡಿ ಸಾರ್ವಜನಿಕ ಉಪಯೋಗಕ್ಕೆ ನೀಡಲು ಕ್ರಮವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.
ತಿಪ್ಪೂರು ಗ್ರಾಮದಲ್ಲಿ ಉತ್ತಮವಾದ ಸಮುದಾಯ ಭವನ ನಿರ್ಮಾಣ ಮಾಡಲು ನಿರ್ಧರಿಸಿ ೧ ಎಕರೆ ಸರ್ಕಾರಿ ಜಮೀನನ್ನು ಮಂಜೂರು ಮಾಡಿಸಲಾಗಿದೆ ಎಂದು ತಿಳಿಸಿದ ಶಾಸಕರು ಭವನ ನಿರ್ಮಾಣಕ್ಕೆ ಶೀಘ್ರದಲ್ಲೇ ಭೂಮಿ ಪೂಜೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ ಶಾಸಕ ಡಿ.ರವಿಶಂಕರ್ ಸಾಲಿಗ್ರಾಮ ತಾಲೂಕು ಕೇಂದ್ರದಲ್ಲೂ ಸುಸಜ್ಜಿತವಾದ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ಕೆ.ಆರ್.ನಗರದ ವಾಲ್ಮೀಕಿ ನಾಯಕ ಸಮುದಾಯ ಭವನದ ಆವರಣದಲ್ಲಿ ದೇವಾಲಯ ನಿರ್ಮಾಣ ಮಾಡಲು ೫ ಲಕ್ಷ ಅನುದಾನ ನೀಡಲಾಗುತ್ತದೆ ಇದರ ಜತೆಗೆ ಸರ್ಕಾರದ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಸಮುದಾಯದ ಮುಖಂಡರಿಗೆ ಆದ್ಯತೆ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ಅಲಂಕೃತಗೊoಡ ತೆರೆದ ವಾಹನದಲ್ಲಿ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರವನ್ನು ವಿವಿಧ ಕಲಾತಂಡಗಳೊAದಿಗೆ ಮೆರವಣಿಗೆ ಮಾಡಲಾಯಿತು. ಡಾ.ಎಸ್.ಜೆ.ಗಣೇಶ್, ಡಾ.ಮಹೇಶ್ವರಪ್ಪ, ರಂಗನಾಥ್, ಟಿ.ಕೆ.ನಾಗೇಶ್, ಅಣ್ಣಾಜಿನಾಯಕ, ಜ್ಯೋತಿಕುಮಾರ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಮಾಜದ ಮುಖಂಡ ಕಲ್ಲಹಳ್ಳಿಶ್ರೀನಿವಾಸ್, ಪ್ರೋ.ಹನುಮಂತಪ್ಪ ಮಾತನಾಡಿದರು. ನಾಯಕರ ಸಂಘದ ಅಧ್ಯಕ್ಷರಾದ ನರಸಿಂಹನಾಯಕ, ಮಾದನಾಯಕ, ಪುರಸಭೆ ಸದಸ್ಯರಾದ ಶಿವುನಾಯಕ್, ಕೋಳಿಪ್ರಕಾಶ್, ಶಂಕರ್, ನಟರಾಜು, ಮಾಜಿ ಸದಸ್ಯ ವಿನಯ್, ಟಿಎಪಿಸಿಎಂಎಸ್ ನಿರ್ದೇಶಕ ತೋಟಪ್ಪನಾಯಕ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸಿದ್ದನಾಯಕ, ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ಇಒ ಜಿ.ಕೆ.ಹರೀಶ್, ಸಮಾಜ ಕಲ್ಯಾಣಾಧಿಕಾರಿ ಎಸ್.ಎಂ.ಅಶೋಕ್, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಅಣ್ಣಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸುಮಿತ, ಶಿಕ್ಷಣ ಸಂಯೋಜಕ ದಾಸಪ್ಪ ಮುಂತಾದವರು ಹಾಜರಿದ್ದರು.

RELATED ARTICLES
- Advertisment -
Google search engine

Most Popular