Wednesday, June 11, 2025
Google search engine

Homeರಾಜ್ಯಕಾವೇರಿ ನೀರು ಹರಿಸುವ ಬಗ್ಗೆ ತಜ್ಞರ ಜೊತೆ ಚರ್ಚೆ: ಡಿ.ಕೆ ಶಿವಕುಮಾರ್

ಕಾವೇರಿ ನೀರು ಹರಿಸುವ ಬಗ್ಗೆ ತಜ್ಞರ ಜೊತೆ ಚರ್ಚೆ: ಡಿ.ಕೆ ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಜುಲೈ ೩೧ರ ವರೆಗೆ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಡಿಕೆಶಿ ಉತ್ತರಿಸಿದರು. ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕೆಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜೊತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇವೆ ಎಂದರು.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ ಎಂದು ಹೇಳಿದರು

RELATED ARTICLES
- Advertisment -
Google search engine

Most Popular