Tuesday, November 18, 2025
Google search engine

Homeರಾಜ್ಯಸುದ್ದಿಜಾಲಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚವ್ಹಾಣ.

ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚವ್ಹಾಣ.

ವರದಿ :ಸ್ಟೀಫನ್ ಜೇಮ್ಸ್.

ಬೆಳಗಾವಿ: ‘ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳು ಇರುವ ಆವರಣ ಮತ್ತು ಬೇರೆ ಪ್ರಾಣಿಗಳಿರುವ ಆವರಣಗಳಲ್ಲಿ ಸೋಂಕು ಹರಡದಂತೆ ತಡೆಯಲು ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾವನ್ನಪ್ಪಿದ ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲು ಬನ್ನೇರುಘಟ್ಟದಿಂದ ಬಂದಿದ್ದ ತಜ್ಞರ ಅಭಿಪ್ರಾಯದ ಪ್ರಕಾರ, ಬ್ಯಾಕ್ಟಿರಿಯಾ ಸೋಂಕಿನಿಂದ ಪ್ರಾಣಿಗಳು ಸಾವನ್ನಪ್ಪಿವೆ ಎಂದು ಶಂಕಿಸಲಾಗಿದೆ. ಈಗ ಬದುಕುಳಿದ ಕೃಷ್ಣಮೃಗಗಳಿಗೂ ಅವರ ಮಾರ್ಗದರ್ಶನದ ಮೇರೆಗೆ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮಲ್ಲಿ 7 ಕೃಷ್ಣಮೃಗಗಳು ಜೀವಂತವಾಗಿವೆ. ಅವು ಸಕ್ರಿಯವಾಗಿವೆ. ಆದರೆ, ಅವುಗಳಿಗೂ ಸೋಂಕು ತಗುಲಿದೆ ಎಂದು ಶಂಕಿಸಲಾಗಿದೆ. ಹಾಗಾಗಿ ತಜ್ಞರು ಮತ್ತೆ ಆಗಮಿಸುತ್ತಿದ್ದಾರೆ’ ಎಂದರು. ‘ಮೃಗಾಲಯದಲ್ಲಿ ಕೆಲಸ ಮಾಡುತ್ತಿರುವ ವೈದ್ಯಾಧಿಕಾರಿ ಮತ್ತು ಸಹಾಯಕ ಪಶುವೈದ್ಯ ಕಳೆದ ಮೂರು ವರ್ಷಗಳಿಂದ ಪ್ರಾಣಿಗಳ ಆರೈಕೆ ಮಾಡುತ್ತಿದ್ದಾರೆ. ವಿವಿಧ ಕಾರ್ಯಾಗಾರಗಳಿಗೆ ಅವರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕೃಷ್ಣಮೃಗಗಳ ಸಾವು ಸಂಭವಿಸಿದೆ. ಗುಜರಾತ್‌ನ ವಡೋದರಾದಲ್ಲಿ ಇಂಥ ಒಂದು ಘಟನೆಯನ್ನು ನಾವು ನೋಡಿದ್ದೇವೆ. ಒಳಾಂಗಗಳ ಮಾದರಿಗಳ ಪರೀಕ್ಷಾ ವರದಿಗಳು ನಿಖರವಾದ ಕಾರಣ ನೀಡಲಿವೆ. ಇದರಿಂದ ಭವಿಷ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ’ ಎಂದು ತಿಳಿಸಿದರು.

‘ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳು ಇರುವ ಆವರಣ
ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ ಸೋಮವಾರ ಭೇಟಿ
ಕೊಟ್ಟು, ಕೃಷ್ಣಮೃಗಗಳ ಸಾವಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು
RELATED ARTICLES
- Advertisment -
Google search engine

Most Popular