Friday, July 3, 2026
Google search engine

Homeರಾಜಕೀಯಮನೆಮನೆಗೆ ಹೋಗಿ ಫಾರಂ ವಿತರಿಸಿ : BLOಗಳಿಗೆ ಸಿಇಒ ಕಠಿಣ ಸೂಚನೆ

ಮನೆಮನೆಗೆ ಹೋಗಿ ಫಾರಂ ವಿತರಿಸಿ : BLOಗಳಿಗೆ ಸಿಇಒ ಕಠಿಣ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಎನ್ಯೂಮರೇಶನ್ ಫಾರಂಗಳನ್ನು ವಿತರಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

SIR ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲೇ, ಕೆಲವು BLOಗಳು ಮನೆಗಳಿಗೆ ತೆರಳದೇ ರಸ್ತೆ ಬದಿಯಲ್ಲಿ ಟೆಂಟ್ ಹಾಕಿಕೊಂಡು ಅಥವಾ ಕಚೇರಿಗಳಲ್ಲೇ ಫಾರಂ ವಿತರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಸುತ್ತೋಲೆ ರವಾನಿಸಿರುವ ಸಿಇಒ, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದ್ದಾರೆ.

ಜೂನ್ 30ರಿಂದಲೇ ಮನೆಮನೆಗೆ ಭೇಟಿ ನೀಡಿ ಫಾರಂ ವಿತರಿಸುವ ಪ್ರಕ್ರಿಯೆ ಆರಂಭವಾಗಬೇಕಿದ್ದರೂ, ಕೆಲವೆಡೆ ಸರಿಯಾದ ರೀತಿಯಲ್ಲಿ ಜಾರಿಗೆ ಬರದಿರುವುದು ದೂರುಗಳಿಗೆ ಕಾರಣವಾಗಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಿಇಒ ಅನ್ಬುಕುಮಾರ್ ಅವರು, ಎಲ್ಲಾ BLOಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರನ ಮನೆಬಾಗಿಲಿಗೆ ಭೇಟಿ ನೀಡಿ ಫಾರಂ ವಿತರಿಸಬೇಕು ಹಾಗೂ SIR ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular