ಕೋಲಾರ: ಪಡಿತರದಾರರಿಗೆ ಇಷ್ಟು ದಿನ ಅಕ್ಕಿಯ ಹಣವನ್ನು ನೀಡುತ್ತಿದ್ದೆವು. ಮುಂದಿನ ತಿಂಗಳಿಂದ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಮಹಾಶಿವರಾತ್ರಿ ಪ್ರಯುಕ್ತ ಅಂತರಗಂಗೆ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, 2.10 ಲಕ್ಷ ಮೆಟ್ರಿಕ್ ಟನ್ ಅಕ್ಕಿಗೆ ಹಣ ನೀಡಿದ್ದು ಕೇಂದ್ರ ಸರಕಾರದಿಂದ ಅಕ್ಕಿ ಸರಬರಾಜು ಆಗುತ್ತಿದೆ. ಇದರಿಂದ ರಾಜ್ಯದ 4.5 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದರು.