Saturday, April 12, 2025
Google search engine

Homeರಾಜ್ಯಅನ್ನಭಾಗ್ಯ ಹಣದ ಬದಲು 10 K.G ಅಕ್ಕಿ ವಿತರಣೆ : ಸಚಿವ ಮುನಿಯಪ್ಪ ಘೋಷಣೆ

ಅನ್ನಭಾಗ್ಯ ಹಣದ ಬದಲು 10 K.G ಅಕ್ಕಿ ವಿತರಣೆ : ಸಚಿವ ಮುನಿಯಪ್ಪ ಘೋಷಣೆ

ಬೆಂಗಳೂರು : ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು 10 ಕೆಜಿ ಅಕ್ಕಿ ವಿತರಣೆ ಮಾಡಲಾಗವುದು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದು, ನಂತರದ ದಿನಗಳಲ್ಲಿ ಅಕ್ಕಿಯ ಲಭ್ಯವಾಗದ ಕಾರಣ ನಮ್ಮ ಸರ್ಕಾರ ಸಾರ್ವಜನಿಕರಿಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ಉಳಿದ 5 ಕೆ.ಜಿ ಅಕ್ಕಿಗೆ ರೂ. 170 ರಂತೆ ನೇರ ನಗದು ವರ್ಗಾವಣೆ ಮಾಡುತ್ತಿದೆ.

ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಒಎಂಎಸ್ಎಸ್(OMSS) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿ ಫೆಬ್ರವರಿ-2025 ಮಾಹೆಯಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಿದೆ ಎಂದು ತಿಳಿಸಿದೆ.

RELATED ARTICLES
- Advertisment -
Google search engine

Most Popular