ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಜಂತುಹುಳು ಬಾಧೆಯಿಂದ ಅಪೌಷ್ಟಿಕತೆ, ರಕ್ತ ಹೀನತೆ, ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಕುಂಠಿತ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುತ್ತವೆ. ಇದರ ನಿವಾರಣೆಗೆ ಇಲಾಖೆ ವತಿಯಿಂದ 19 ವರ್ಷದ ಎಲ್ಲ ಮಕ್ಕಳಿಗೆ ಆಲ್ ಬೆಂಡಜೋಲ್ ಮಾತ್ರೆಗಳನ್ನು ವಿತರಿಸಲಾಗುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ತಿಳಿಸಿದರು.
ಅವರು ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬಿಜಿಎಸ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಫೆ.24 ರಂದು ಪದವಿ ಕಾಲೇಜು ವಿಧ್ಯಾರ್ಥಿಗಳಿಗೆ, ಫೆ.27 ಮಕ್ಕಳಿಗೆ ಹಾಗೂ ಶಾಲಾ,ಕಾಲೇಜಿನ ವಿದ್ಯಾರ್ಥಿಗಳಿಗೆ, ಮಾರ್ಚ್ 8 ರಂದು 1ರಿಂದ 5 ವರ್ಷದೊಳಗಿನ ಮಕ್ಕಳಿಗೆ, ಶಾಲೆಯಿಂದ ಹೊರಗಿಳಿದ ಮತ್ತು ಅಂಗನವಾಡಿದಲ್ಲಿ ಜಂತು ಹುಳು ನಿವಾರಣೆಯ ಅಲ್ಬೆಂಡಝೋಲ್ ಮಾತ್ರೆ ವಿತರಸಲಾಗುವುದು ಎಂದು ತಿಳಿಸಿದರು.
ಪೌಷ್ಠಿಕ ಆಹಾರ ಸೇವಿಸಿದರೂ ಜಂತು ಹುಳು ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆ ಉಂಟಾಗಿ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮವಾಗುತ್ತದೆ. ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳಲಿದೆ. ಆದ್ದರಿಂದ 1 ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಮಾತ್ರೆ ನೀಡಲಾಗುವುದು, ಜಂತುಹುಳು ರಹಿತ ಮಕ್ಕಳು, ಆರೋಗ್ಯವಂತ ಮಕ್ಕಳು. ಪ್ರತಿಯೊಬ್ಬರು ಮಕ್ಕಳಿಗೆ ತಪ್ಪದೇ ಮಾತ್ರೆ ಪಡೆಯರಿ.
- ಡಾ.ಡಿ.ನಟರಾಜು, ಆರೋಗ್ಯಾಧಿಕಾರಿ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು.
ಮಕ್ಕಳಲ್ಲಿನ ರಕ್ತಹೀನತೆ ಸಮಸ್ಯೆ ನಿವಾರಣೆಗಾಗಿ ಸರ್ಕಾರ 1 ವರ್ಷದಿಂದ 19 ವರ್ಷದೊಳಗಿನ ಮಕ್ಕಳಿಗೆ ವರ್ಷಕ್ಕೆ 2 ಬಾರಿ ಜಂತು ಹುಳು ನಿವಾರಣೆ ಮಾತ್ರೆಯನ್ನು ಉಚಿತವಾಗಿ ನೀಡುತ್ತಿದೆ’ ಎಂದು ತಿಳಿಸಿದ ಅವರು .ಮಕ್ಕಳು ಆರೋಗ್ಯವಂತರಾಗಿದ್ದರೆ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯ. ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಉಚಿತವಾಗಿ ಮಾತ್ರೆ ವಿತರಿಸಾಗುತ್ತೆ,. ಅಂದು ಮಾತ್ರೆ ಪಡೆಯದ ಮಕ್ಕಳಿಗೆ ಇನ್ನೊಂದು ದಿನ ನೀಡಲಾಗುವುದು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಾತ್ರೆ ಪಡೆಯದ ಮಕ್ಕಳಿಗೆ ತಪ್ಪದೇ ಜಂತು ಹುಳು ಮಾತ್ರೆ ವಿತರಿಸಿ ಎಂದು ತಿಳಿಸಿದರು.
ಜಂತು ಹುಳುವಿನಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ, ಹಸಿವು ಅಗದಿರುವುದು. ನಿಶಕ್ತಿ, ಹೊಟ್ಟೆ ನೋವು, ವಾಂತಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದರಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಾರೆ. ಮಾತ್ರೆ ನುಂಗುವುದರಿಂದ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ’ ಎಂದು ವಿವರಿಸಿದರು.

ಪ್ರತಿ ವರ್ಷ ಆಚರಣೆ : ‘ಪ್ರತಿ ವರ್ಷ ಫೆ.10 ರಂದು ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನ ಆಚರಿಸಲಾಗುತ್ತಿದ್ದು, ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲ್ಲೂಕಿನಲ್ಲಿ ಈ ಬಾರಿ 45213 ಶಾಲಾ.ಕಾಲೇಜು ಮಕ್ಕಳಿಗೆ ಜಂತು ಹುಳು ನಿವಾರಣೆ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ’ ಸರ್ಕಾರಿ ಮತ್ತು ಖಾಸಾಗಿ ಶಾಲೆಗಳು 335 ಹಾಗೂ ಅಂಗನವಾಡಿ ಕೇಂದ್ರಗಳು 300, ಇದರಲ್ಲಿ ಅಂನಗವಾಡಿ ಕೇಂದ್ರದ ಮಕ್ಜಳು 12367, ಶಾಲಾ ಮಕ್ಕಳು 28526, ಕಾಲೇಜು ವಿದ್ಯಾರ್ಥಿಗಳು 4320 ಇದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಮಾಹಿತಿ ನೀಡಿದರು.
ಸಿಡಿಪಿಓ ಅಣ್ಣಯ್ಯ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ, ವೈದ್ಯಾಧಿಕಾರ ಡಾ.ಉಮಾ, ಡಾ.ರೇವಣ್ಣ, ಡಾ.ದಿನೇಶ್, ಹಿರಿಯ ಆರೋಗ್ಯಸಹಾಯಕ ಗಂಗಾಧರ್, ಪ್ರಾಂಶುಪಾಲ ದೇವೇಂದ್ರನಾಯಕ್ , ಉಪನ್ಯಾಸಕರು, ಸಹ ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.