Monday, April 21, 2025
Google search engine

Homeರಾಜ್ಯಸುದ್ದಿಜಾಲಜಿಲ್ಲೆಯ ಪಿಯು ವಿದ್ಯಾರ್ಥಿನಿಯರಿಗೆ ಅಭಿಯಾನ ಪತ್ರ ವಿತರಣೆ

ಜಿಲ್ಲೆಯ ಪಿಯು ವಿದ್ಯಾರ್ಥಿನಿಯರಿಗೆ ಅಭಿಯಾನ ಪತ್ರ ವಿತರಣೆ

ದಾವಣಗೆರೆ: ದ್ವೀತಿಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶಿಕ್ಷಣ ಮುಂದುವರೆಸಲು ಬೇಟಿ ಬಚಾವೊ, ಬೇಟಿ ಪಡಾವೊ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು ಪಿ.ಯು.ಸಿ ನಂತರ ಮುಂದಿನ ಶಿಕ್ಷಣ ಮುಂದುವರೆಸುವ ಮೂಲಕ ತಮ್ಮ ಭವಿಷ್ಯ ಭವ್ಯವಾಗಿರಲೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿನಿಯರಿಗೆ ಅಭಿಯಾನ ಪತ್ರವನ್ನು ನೀಡಲಾಗುತ್ತಿದೆ.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ರವರು ಶುಭಾಶಯ ಪತ್ರ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.


ಶಿಕ್ಷಣ ಕೇವಲ ಜ್ಞಾನಾರ್ಜನೆ ಮಾತ್ರವಲ್ಲ, ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಶಿಕ್ಷಣ ವೈಯಕ್ತಿಕ ಬದುಕಿನ ಸೌಂದರ್ಯ ಹೆಚ್ಚಿಸುವ ಆಭರಣವಾಗಿದೆ. ತಂದೆ, ತಾಯಿಗಳು ಶಿಕ್ಷಣ ದೀಕ್ಷೆ ಕೊಡಿಸಿದ್ದಾರೆ. ಶಿಕ್ಷಕರು ಸಹ ಪಾಠ ಮಾಡುವ ಮೂಲಕ ಭವಿಷ್ಯ ಭವ್ಯವಾಗಲಿ ಎಂದು ಪ್ರಾರ್ಥಿಸುತ್ತಾರೆ. ತಮ್ಮ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಪ್ರೋತ್ಸಾಹ, ಸಹಕಾರ ನೀಡುತ್ತಿದ್ದಾರೆ. ಇವೆಲ್ಲವನ್ನು ಸದ್ಬಳಕೆ ಮಾಡಿಕೊಂಡು ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಅಭಿಯಾನದಲ್ಲಿ ಕೈಜೋಡಿಸಬೇಕೆಂದು ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತೀರ್ಣರಾಗಿ ಶಿಕ್ಷಣ ಮುಂದುವರೆಸಿ ಸ್ವಾವಲಂಭಿಗಳಾಗಿ ಬದುಕು ಕಟ್ಟಿಕೊಳ್ಳಿರಿ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ಇದೇ ವೇಳೆ ತಿಳಿಸಿದರು.

ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular