Friday, April 4, 2025
Google search engine

Homeಸ್ಥಳೀಯಪ್ಲಾಸ್ಟಿಕ್ ನಿಷೇಧ ಜಾಗೃತಿ ಕಾರ್ಯಕ್ರಮ: ಜೂ.13 ರಂದು ಪ್ರವಾಸಿಗರು, ಭಕ್ತಾದಿಗಳಿಗೆ  ಬಟ್ಟೆ ಬ್ಯಾಗ್ ವಿತರಣೆ

ಪ್ಲಾಸ್ಟಿಕ್ ನಿಷೇಧ ಜಾಗೃತಿ ಕಾರ್ಯಕ್ರಮ: ಜೂ.13 ರಂದು ಪ್ರವಾಸಿಗರು, ಭಕ್ತಾದಿಗಳಿಗೆ  ಬಟ್ಟೆ ಬ್ಯಾಗ್ ವಿತರಣೆ

ಮೈಸೂರು: ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಪ್ಲಾಸ್ಟಿಕ್ ಮುಕ್ತ ಚಾಮುಂಡಿ ಬೆಟ್ಟ ಪ್ರವಾಸಿಗರಿಗೂ ಹಾಗೂ ಭಕ್ತಾದಿಗಳಿಗೂ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ನಿಷೇಧ ಜಾಗೃತಿ ಕಾರ್ಯಕ್ರಮವು ಜೂನ್ 13 ರಂದು ಬೆಳಗ್ಗೆ 7.30 ಗಂಟೆಗೆ ಚಾಮುಂಡಿ ಬೆಟ್ಟದ ಪಾದದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮಹಾಪೌರರಾದ ಶಿವಕುಮಾರ್, ಪಾಲಿಕೆ ಆರೋಗ್ಯ ಅಧಿಕಾರಿ ಡಾಕ್ಟರ್ ನಾಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ,ಅಂಬಾಭವಾನಿ ಮಹಿಳಾ ಸಮಾಜದ ಅಧ್ಯಕ್ಷ ಸವಿತಾ ಘಾಟ್ಕೆ , ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.

RELATED ARTICLES
- Advertisment -
Google search engine

Most Popular