ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕು ವ್ಯಾಪ್ತಿಯ ತಲಾ ೧೦ ಮಂದಿ ವಿಕಲಚೇತನರಿಗೆ ತಾಲೂಕು ಪಂಚಾಯಿತಿಯ ಅನಿಬಂರ್ಧಿತ ಅನುದಾನದಲ್ಲಿ ನಾಲ್ಕು ಚಕ್ರಗಳ ವಾಹನ ವಿತರಿಸಲಾಗಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಾಹನಗಳನ್ನು ವಿತರಿಸಿ ಮಾತನಾಡಿದ ಅವರು ಪ್ರತಿ ನಾಲ್ಕು ವಾಹನಕ್ಕೆ ತಲಾ ೧.೯ ಲಕ್ಷ ವ್ಯಯಿಸಿದ್ದು ಇವುಗಳನ್ನು ಪಡೆದವರು ಸದುಪಯೋಗ ಪಡಿಸಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದರು. ಮುಂದಿನ ದಿನಗಳಲ್ಲಿ ಆದ್ಯತೆ ಮೇರೆಗೆ ಎಲ್ಲಾ ವಿಕಲಚೇತನರಿಗೂ ವಾಹನ ವಿತರಣೆ ಮಾಡುವುದಾಗಿ ಮಾಹಿತಿ ನೀಡಿದ ಶಾಸಕರು ಅಧಿಕಾರಿಗಳು ಅರ್ಹರನ್ನು ಗುರುತಿಸಿ ಪಟ್ಟಿ ಮಾಡಿ ನನಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಬಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ನಿರ್ವಹಣೆ ಮಾಡುತ್ತಿದ್ದು ಕರ್ನಾಟಕದ ೪ ಕೋಟಿಗೂ ಅಧಿಕ ಮಂದಿ ನಾಗರೀಕರು ಯೋಜನೆಯ ಅನುಕೂಲ ಪಡೆಯುತ್ತಿದ್ದಾರೆ ಎಂದು ನುಡಿದರು. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ರದ್ದಾಗುವುದಿಲ್ಲ ನಮ್ಮ ಸರ್ಕಾರ ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸರ್ವಾಂಗೀಣ ಅಭಿವೃದ್ದಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿದ್ದು ನಮ್ಮೊಂದಿಗೆ ಎಲ್ಲರೂ ಸಹಾಯ ಹಸ್ತ ಚಾಚಬೇಕೆಂದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ನಿರ್ದೇಶಕರಾದ ಸೈಯದ್‌ಜಾಬೀರ್, ಸರಿತಾಜವರಪ್ಪ, ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ನಟರಾಜು, ಜಿ.ಪಂ. ಮಾಜಿ ಸದಸ್ಯರಾದ ಜಿ.ಆರ್.ರಾಮೇಗೌಡ, ಮಾರ್ಚಳ್ಳಿಶಿವರಾಮು, ಜಯರಾಮೇಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚರ?ನಹಳ್ಳಿಶಿವಣ್ಣ, ಗ್ರಾ.ಪಂ. ಸದಸ್ಯ ಕೆ.ಪಿ.ಜಗದೀಶ್, ಮಾಜಿ ಸದಸ್ಯ ಎಂ.ಎಸ್.ಅನಂತ್, ರಾಜ್ಯ ಕಾಂಗ್ರೆಸ್ ಎಸ್‌ಟಿ ಘಟಕದ ಉಪಾಧ್ಯಕ್ಷ ಕಲ್ಲಹಳ್ಳಿಶ್ರೀನಿವಾಸ್, ತಾಲೂಕು ಅಧ್ಯಕ್ಷ ಮಹದೇವನಾಯಕ, ಸಾಲಿಗ್ರಾಮ ತಾಲೂಕು ಎಸ್‌ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾರವಿ, ಮುಖಂಡರಾದ ನಂದೀಶ್, ಎಲ್.ಎಂ.ಸಣ್ಣಪ್ಪ, ನಟರಾಜು, ತಾ.ಪಂ. ಇಒ ಕುಲ್‌ದೀಪ್, ಸಿಡಿಪಿಒ ಸಿ.ಎಂ.ಅಣ್ಣಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.