ರಾಮನಗರ: ಗ್ರಂಥಾಲಯ ಮೇಲ್ವಿಚಾರಕ ತರಬೇತಿ ಕಾರ್ಯಕ್ರಮ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಣ ಪೌಂಡೇಶನ್ ಸಂಸ್ಥೆಯು ಡೆಲ್ ಸಂಸ್ಥೆಯ ಸಹಕಾರದೊಂದಿಗೆ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದ್ದು 2022ರ ಸಾಲಿನಲ್ಲಿ 70 ಗ್ರಾಮ ಪಂಚಾಯಿತಿಗಳಿಗೆ ಡಿಜಿಟಲ್ ಸಾಧನಗಳನ್ನು ನೀಡುವುದರ ಮೂಲಕ ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ. 2023 -24 ನೇ ಸಾಲಿನಲ್ಲಿ ರಾಮನಗರ ಜೆಲ್ಲೆಯ 36 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಗಳನ್ನು ಮಾನ್ಯ ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯರವರು ವಿತರಣೆ ಮಾಡಿ ಡಿಜಿಟಲ್ ಸಾಧನಗಳನ್ನು ಉತ್ತಮವಾಗಿ ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಯುವ ಜನತೆಗೆ ಡಿಜಿಟಲ್ ಕೌಶಲ್ಯಗಳು ಕಲಿಸಿ ಕೊಡಬೇಕೆಂದು ತಿಳಿಸಿದರು.

ಮುಖ್ಯ ಗ್ರಂಥಾಲಯ ಅಧಿಕಾರಿಗಳಾದ ಚೆನ್ನಕೇಶವ ರವರು ಮಾತನಾಡಿ ಶಿಕ್ಷಣ ಪೌಂಡೇಶನ್ ಸಂಸ್ಥೆ ನೀಡಿರುವಂತಹ ಡಿಜಿಟಲ್ ಪರಿಕರಗಳನ್ನು ಸಮರ್ಪಕವಾಗಿ ತಮ್ಮ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಬಳಸಬೇಕೆಂದು ತಿಳಿಸಿದರು ಹಾಗೂ ರಾಮನಗರ ಜಿಲ್ಲೆಯ ಜಿಲ್ಲಾ ಸಂಯೋಜಕರಾದ ಯೋಗೇಶ್ ಮಾತನಾಡಿ ಡಿಜಿಟಲ್ ಸಾಧನಗಳನ್ನು ಹೇಗೆ ಬಳಕೆ ಮಾಡಬೇಕೆಂಬುದರ ಕುರಿತು ವಿಷಯವನ್ನು ಹಂಚಿಕೊಂಡರು .