ಬಾಗಲಕೋಟ: ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ವಿದ್ಯಾರ್ಥಿನಿಯರಿಗೆ ೨೦೨೩-೨೪ ನೇ ಸಾಲಿನ ಉಚಿತ ಸಮವಸ್ತ್ರ ಹಾಗೂ ಶೂ, ಸಾಕ್ಸ್’ಗಳನ್ನು ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡು ಮಕ್ಕಳಿಗೆ ಸರಕಾರ ನೀಡುತ್ತಿರುವ ಸೌಲಭ್ಯಗಳನ್ನು ಪಡೆದುಕೊಂಡು ಗುಣಾತ್ಮಕ ಶಿಕ್ಷಣ ಪಡೆದು, ಉತ್ತಮ ನಾಗರಿಕನಾಗಬೇಕೆಂದು ಹೇಳಿದರು.
ಶಾಲೆಯ ಪ್ರಭಾರಿ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ ಶಿಕ್ಷಣ ಇಲಾಖೆಯ ಯೋಜನೆಗಳು ಮಕ್ಕಳ ಕಲಿಕೆ ಪೂರಕವಾಗಿವೆ. ಹಾಗೂ ಸಮುದಾಯದ ಸಹಕಾರದಿಂದ ಶಾಲೆಯು ಮತ್ತಷ್ಟು ಅಭಿವೃದ್ಧಿ ಪಥದತ್ತ ಸಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಶ್ರೀಮತಿ ಜ್ಯೋತಿ, ಜಿ ಆರ್ ನದಾಫ್, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.