ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಹಳೆ ವಿದ್ಯಾರ್ಥಿ ಸಂಘ ಕರಂಬಾರು ವತಿಯಿಂದ ಕರಂಬಾರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು.
ಶಾಲಾ ಸಭಾಂಗಣದಲ್ಲಿ ನಡೆದ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್ ಡಿಎಂಸಿ ಅಧ್ಯಕ್ಷ ರಾಘವೇಂದ್ರ. ಎಸ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಶಂಕರ್ ಶೆಟ್ಟಿ ಗಂಡೋಟ್ಟು, ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಮೇಡಂ ಮತ್ತು ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಎಸ್ ಡಿಎಂಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಮಾರು 2 ಲಕ್ಷ ಮೌಲ್ಯ ದ ಉಚಿತ ಸಮವಸ್ತ್ರ ವಿತರಿಸಲಾಯಿತು. ಮತ್ತು ಶೂ ಮತ್ತು ಬೆಲ್ಟ್ ವಿತರಿಸಲಾಯಿತು.
ಕಾರ್ಯಕ್ರಮ ನಿರೂಪಣೆ ಯನ್ನು ಮಾಲಾಶ್ರೀ ನಿರ್ವಹಿಸಿದರು. ಗೀತಾ ಎಸ್ ಸ್ವಾಗತಿಸಿದರು. ಉಷಾ. ಎಂ ವಂದಿಸಿದರು.