Monday, April 21, 2025
Google search engine

Homeರಾಜ್ಯಸುದ್ದಿಜಾಲಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಪ್ರಶಾಂತ್ ಕುಮಾರ್ ಮಿಶ್ರಾ

ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದ್ದು,ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಚುನಾವಣೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ನಿಮಿತ್ಯ ಮೇ. 7 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು. ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಕಲಂ 144 ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದ್ದು, 5 ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚನೆ ನೀಡಲಾಗಿದೆ. ಮತದಾನದ ದಿನ ಸಾರ್ವತ್ರಿಕ ರಜೆ, ಮೇ. 08 ರ ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯದ್ಯಂತ ಮದ್ಯ ಮಾರಾಟ ನಿಷೇಧಿಸಿದ್ದು ಡ್ರೈ ಡೇ ಆಚರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರ್ಯಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಡಿಸಿ ಮಿಶ್ರಾ ಅವರು ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ, ಅಂಗವಿಕಲರಿಗೆ ರ್ಯಾಂಪ್, ವೀಲ್‍ಚೇರ್ ವ್ಯವಸ್ಥೆ ಹಾಗೂ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ತೀವ್ರ ಬಿಸಿಲಿನ ಬೇಗೆ ಇರುವುದರಿಂದ ಮತಗಟ್ಟೆಗಳಲ್ಲಿ ಸ್ಟ್ಯಾಂಡಿಂಗ್ ಫ್ಯಾನ್ ಅಥವಾ ಕೂಲರ್ ವ್ಯವಸ್ಥೆಗೊಳಿಸಲು ಆಯಾ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular