Wednesday, June 17, 2026
Google search engine

Homeರಾಜ್ಯಸುದ್ದಿಜಾಲಯೋಗ ದಿನಾಚರಣೆಗೆ ಮಂಡ್ಯ ಸಜ್ಜು: ಪಿಇಎಸ್ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಯೋಗ ದಿನಾಚರಣೆಗೆ ಮಂಡ್ಯ ಸಜ್ಜು: ಪಿಇಎಸ್ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಮಂಡ್ಯ: ಜೂನ್ 21ರಂದು ಮಂಡ್ಯದ ಪಿಇಎಸ್ (PES) ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆಗಳ ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಸುಮಾರು 10,000ಕ್ಕೂ ಹೆಚ್ಚು ಜನರನ್ನು ಸೇರಿಸಲು ಯೋಜನೆ ರೂಪಿಸಲಾಗಿದ್ದು ಸ್ಥಳದಲ್ಲಿ ಆಂಬ್ಯುಲೆನ್ಸ್, ಪ್ರಥಮ ಚಿಕಿತ್ಸಾ ಘಟಕಗಳು ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲು ಆರೋಗ್ಯ ಇಲಾಖೆಗೆ ಸೂಚಿಸಿದರು.

ಸುಗಮ ಸಂಚಾರ ನಿರ್ವಹಣೆ ಹಾಗೂ ವಾಹನಗಳ ನಿಲುಗಡೆಗೆ ಬಗ್ಗೆ ಪರಿಶೀಲನೆ ನಡೆಸಿ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯವರಿಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ವಿಭಾಗಧಿಕಾರಿ ಶಿವಮೂರ್ತಿ, ಪೀಪಲ್ಸ್ ಎಜುಕೇಶನ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷರಾದ ಕೆ. ಎಸ್. ವಿಜಯಾನಂದ್, ಆಯುಷ್ ಇಲಾಖೆಯ ಅಧಿಕಾರಿ ಡಾ ಪುಷ್ಪಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular